ಬೆಂಗಳೂರಿಗೆ ಬಿಗ್ ಶಾಕ್! ವಾಹನ ಸವಾರರಿಗೆ ಶಾಕ್ ಮೇಲೆ ಶಾಕ್!

ಬೆಂಗಳೂರು ವಾಹನ ಸವಾರರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಬಿಗ್ ಶಾಕ್ ಎದುರಾಗುವ ಸಾಧ್ಯತೆ ಇದೆ..! ಇನ್ಮುಂದೆ ಸೈಕಲ್ ಹೊರತುಪಡಿಸಿ ಬಹುತೇಕ ಎಲ್ಲಾ ವಾಹನಗಳ ಪಾರ್ಕಿಂಗ್‌ಗೆ ಶುಲ್ಕ ವಿಧಿಸುವ ಪ್ರಸ್ತಾವನೆ ಮುಂದಾಗಿದೆ. ಫ್ರೀ ಪಾರ್ಕಿಂಗ್‌ಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದ್ದು, ರಸ್ತೆಗಳನ್ನು ಎ, ಬಿ ಮತ್ತು ಸಿ ಮಾದರಿಗಳಾಗಿ ವಿಂಗಡಿಸಿ ಪಾರ್ಕಿಂಗ್ ಶುಲ್ಕ ನಿಗದಿಪಡಿಸುವ ಚಿಂತನೆ ನಡೆಸಿದೆ.

8/13/20261 min read

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪಾರ್ಕಿಂಗ್ ಸಮಸ್ಯೆಗೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಹೊಸ ನಿಯಮ ಜಾರಿಗೆ ತರುವ ಸಿದ್ಧತೆ ನಡೆಸಿದೆ. ಸೈಕಲ್ ಹೊರತುಪಡಿಸಿ ಎಲ್ಲಾ ವಾಹನಗಳಿಗೂ ಪಾರ್ಕಿಂಗ್ ಶುಲ್ಕ ವಿಧಿಸುವ ಪ್ರಸ್ತಾವನೆ ಕರಡು ಅಧಿಸೂಚನೆಯಲ್ಲಿ ಉಲ್ಲೇಖವಾಗಿದೆ.

ರಾತ್ರಿ 8 ಗಂಟೆಯಿಂದ ಬೆಳಗ್ಗೆ 8 ಗಂಟೆವರೆಗೆ ಮಾತ್ರ ಉಚಿತ ಪಾರ್ಕಿಂಗ್‌ಗೆ ಅವಕಾಶ ನೀಡುವ ಪ್ರಸ್ತಾವನೆಯಿದ್ದು, ಹಗಲಿನ ವೇಳೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ ಪಾವತಿಸಬೇಕಾಗಬಹುದು. ಆದರೆ ಆಟೋ ನಿಲ್ದಾಣಗಳಲ್ಲಿ ಮಾತ್ರ ಉಚಿತ ಪಾರ್ಕಿಂಗ್‌ಗೆ ಅವಕಾಶ ಕಲ್ಪಿಸುವ ಪ್ರಸ್ತಾವನೆ ಇದೆ. ನಗರದ ರಸ್ತೆಗಳನ್ನು ಎ, ಬಿ ಮತ್ತು ಸಿ ಕ್ಯಾಟಗರಿಗಳಾಗಿ ವಿಂಗಡಿಸಿ, ಆಯಾ ರಸ್ತೆಗಳ ವ್ಯಾಪ್ತಿ ಮತ್ತು ಪ್ರಾಮುಖ್ಯತೆಗೆ ಅನುಗುಣವಾಗಿ ಪಾರ್ಕಿಂಗ್ ಶುಲ್ಕ ನಿಗದಿ ಮಾಡಲು ಸರ್ಕಾರ ಮುಂದಾಗಿದೆ.

ಇನ್ನು ಆಫ್-ಸ್ಟ್ರೀಟ್ ಪಾರ್ಕಿಂಗ್ ಬಳಸುವವರಿಗೆ ಮಾಸಿಕ ಪಾಸ್ ಕಡ್ಡಾಯಗೊಳಿಸುವ ಚಿಂತನೆಯೂ ನಡೆದಿದೆ. ಸಿಗ್ನಲ್‌ಗಳ 50 ಮೀಟರ್ ಅಂತರದಲ್ಲಿ ವಾಹನ ನಿಲ್ಲಿಸುವಂತಿಲ್ಲ ಎಂಬ ನಿಯಮಕ್ಕೂ ಒತ್ತು ನೀಡಲಾಗಿದೆ. ಉಪ ಮುಖ್ಯ ರಸ್ತೆಗಳಲ್ಲಿ ನಿರ್ದಿಷ್ಟ 25 ಮೀಟರ್ ವ್ಯಾಪ್ತಿಯಲ್ಲಿನ ಪಾರ್ಕಿಂಗ್ ಮೇಲೂ ನಿಯಂತ್ರಣ ವಿಧಿಸುವ ಪ್ರಸ್ತಾವನೆ ಇದೆ.

ಮನೆ ಮುಂದೆ ವಾಹನ ಪಾರ್ಕ್ ಮಾಡುವವರಿಗೂ ಈ ನಿಯಮದ ಬಿಸಿ ತಟ್ಟುವ ಸಾಧ್ಯತೆ ಇದೆ. ಪಾರ್ಕಿಂಗ್ ಶುಲ್ಕ ಪಾವತಿಸುವ ಜವಾಬ್ದಾರಿ ಮನೆ ಮಾಲೀಕರ ಮೇಲಿರಲಿದ್ದು, ಬಾಡಿಗೆದಾರರಿಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವ ಹೊಣೆಯನ್ನೂ ಮನೆ ಮಾಲೀಕರಿಗೇ ವಹಿಸುವ ಪ್ರಸ್ತಾವನೆ ಮುಂದಾಗಿದೆ.

ಬೆಂಗಳೂರಿನ ಪಾರ್ಕಿಂಗ್ ವ್ಯವಸ್ಥೆಗೆ ದೊಡ್ಡ ಮಟ್ಟದ ಬದಲಾವಣೆ ತರಲು ರಾಜ್ಯ ಸರ್ಕಾರ ಮುಂದಾಗಿದ್ದು, ಫ್ರೀ ಪಾರ್ಕಿಂಗ್‌ಗೆ ಬ್ರೇಕ್ ಬೀಳುವ ಸಾಧ್ಯತೆ ದಟ್ಟವಾಗಿದೆ. ಆದರೆ ಸದ್ಯ ಇದು ಕರಡು ಅಧಿಸೂಚನೆಯಾಗಿದ್ದು, ಅಂತಿಮ ನಿಯಮಗಳು ಜಾರಿಯಾದ ಬಳಿಕವೇ ವಾಹನ ಸವಾರರ ಜೇಬಿಗೆ ಎಷ್ಟು ಕತ್ತರಿ ಬೀಳಲಿದೆ ಅನ್ನೋದು ಸ್ಪಷ್ಟವಾಗಲಿದೆ.

ಮನೆ ಮುಂದೆ ವಾಹನ ನಿಲ್ಲಿಸಿದ್ರೂ ಫೈನ್!!

ನಮ್ಮನ್ನು ಸಂಪರ್ಕಿಸಲು ದಯವಿಟ್ಟು ಈ ವಿವರಗಳನ್ನು ಬಳಸಿ

s3kannadanews@gmail.com

+91 9902544556

© 2026 S3 Media House. All Rights Reserved.

ನಮ್ಮ ನ್ಯೂಸ್ ಅಪ್ಡೇಟ್ಗಳಿಗಾಗಿ ಸಬ್ಸ್ಕ್ರೈಬ್ ಮಾಡಿ

ನಮ್ಮ ವಾಟ್ಸ್ ಆಪ್ ಚಾನೆಲ್ ಗೆ ಸೇರಲು ಈ ಬಟನ್ ಕ್ಲಿಕ್ ಮಾಡಿ ಕ್ಷಣ ಕ್ಷಣದ ಆಪ್ಡೆಟ್ ಪಡೆಯಿರಿ.