"ದೇವಸ್ಥಾನಗಳಲ್ಲಿ ಹುಂಡಿ ಕಳ್ಳರಿದ್ದಾರೆ ಎಂಬ ಫಲಕ ಹಾಕಬೇಕು’"
ದೇವಸ್ಥಾನಗಳಲ್ಲಿ ಈ ಹಿಂದೆ ಚಪ್ಪಲಿ ಕಳ್ಳರ ಬಗ್ಗೆ ಎಚ್ಚರಿಕೆ ಫಲಕ ಹಾಕಲಾಗುತ್ತಿತ್ತು. ಇನ್ನು ಮುಂದೆ ಹುಂಡಿ ಕಳ್ಳರಿದ್ದಾರೆ ಎಂಬ ಫಲಕ ಹಾಕುವ ಪರಿಸ್ಥಿತಿ ಬಂದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವ್ಯಂಗ್ಯವಾಡಿದರು.
ರಾಜಕೀಯ
7/1/20261 min read


ರಾಮ ಮಂದಿರದ ದೇಣಿಗೆ ದೋಚಿದ ಆರೋಪಗಳ ಕುರಿತು ಕಾಂಗ್ರೆಸ್ ಹಿರಿಯ ನಾಯಕ, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ದೇವಸ್ಥಾನಗಳಲ್ಲಿ ಈ ಹಿಂದೆ ಚಪ್ಪಲಿ ಕಳ್ಳರ ಬಗ್ಗೆ ಎಚ್ಚರಿಕೆ ಫಲಕ ಹಾಕಲಾಗುತ್ತಿತ್ತು. ಇನ್ನು ಮುಂದೆ ಹುಂಡಿ ಕಳ್ಳರಿದ್ದಾರೆ ಎಂಬ ಫಲಕ ಹಾಕುವ ಪರಿಸ್ಥಿತಿ ಬಂದಿದೆ ಎಂದು ವ್ಯಂಗ್ಯವಾಡಿದರು. ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ರಾಮನ ಹೆಸರಿನಲ್ಲಿ ಲೂಟಿ ನಡೆದಿದೆ ಎಂದು ಆರೋಪಿಸಿದ ಅವರು, ಆರೋಪಿಗಳ ವಿರುದ್ಧ ಇದುವರೆಗೆ ಯಾವುದೇ ಕಠಿಣ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಪ್ರಶ್ನಿಸಿದರು.
ಸುಮಾರು 200 ಕೋಟಿ ರೂಪಾಯಿ ಎಲ್ಲಿಗೆ ಹೋಗಿದೆ ಎಂಬುದನ್ನು ಬಹಿರಂಗಪಡಿಸಬೇಕು. ಈ ಪ್ರಕರಣದ ಬಗ್ಗೆ ಅತ್ಯಂತ ಆಳವಾದ ತನಿಖೆ ನಡೆಸಬೇಕಿದ್ದು, ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಯಬೇಕು ಎಂದು ಆಗ್ರಹಿಸಿದರು.


ಎಸ್‌ಐಟಿ ತನಿಖೆ ಕೇವಲ ಕಣ್ಣೊರೆಸುವ ಪ್ರಯತ್ನವಾಗಿದ್ದು, ತಪ್ಪಿತಸ್ಥರನ್ನು ಗುರುತಿಸಿ ಜೈಲಿಗೆ ಕಳುಹಿಸಬೇಕು ಎಂದು ಬಿಕೆ ಹರಿಪ್ರಸಾದ್ ಒತ್ತಾಯಿಸಿದರು.
ದೇಶಾದ್ಯಂತ ನೋಂದಣಿಯಾಗದ ಸಂಸ್ಥೆಗಳು ಸಮಸ್ಯೆ ಸೃಷ್ಟಿಸುತ್ತಿವೆ. ಎಲ್ಲ ಸಂಸ್ಥೆಗಳೂ ಸಂವಿಧಾನದ ಚೌಕಟ್ಟಿನಡಿ ನೋಂದಣಿ ಮಾಡಿಕೊಂಡು ನಿಯಮಬದ್ಧವಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಅಭಿಪ್ರಾಯಪಟ್ಟರು.


