ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ನೀಡಿದ ನೆನಪಿನ ಕಾಣಿಕೆಯಲ್ಲಿ ಕನ್ನಡದ ಕಗ್ಗೊಲೆ!
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಇವರ ವತಿಯಿಂದ ನೀಡಿದ ನೆನಪಿನ ಕಾಣಿಕೆಯಲ್ಲಿ ಕನ್ನಡದ ಕಗ್ಗೊಲೆ ಮಾಡಲಾಗಿದೆ.
ಬೆಂಗಳೂರು ಗ್ರಾಮಾಂತರ
8/15/20261 min read


ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಇಂದು 80 ನೇ ಸ್ವಾತಂತ್ರ್ಯ ದಿನಾಚರಣೆ ಯನ್ನು ದೇವನಹಳ್ಳಿ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಸಚಿವ ಕೆ.ಹೆಚ್.ಮುನಿಯಪ್ಪ ಸೇರಿದಂತೆ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಸಿಇಓ , ಪೊಲೀಸ್ ಇಲಾಖೆ ಹಾಗೂ ಸಂಘ ಸಂಸ್ಥೆಗಳು ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಹಲವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗಣ್ಯರು ಸೇರಿದಂತೆ ಹಲವರಿಗೆ ನೆನಪಿನ ಕಾಣಿಕೆಯನ್ನು ನೀಡಲಾಗಿತ್ತು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಇವರ ವತಿಯಿಂದ ನೀಡಿದ ನೆನಪಿನ ಕಾಣಿಕೆಯಲ್ಲಿ ಕನ್ನಡದ ಕಗ್ಗೊಲೆ ಮಾಡಲಾಗಿದೆ. ಜಿಲ್ಲಾಡಳಿತ ಎಂದು ಮುದ್ರಿಸುವ ಬದಲಾಗಿ ಜಿಲ್ಲರ್ಢತ ಎಂದು ಮುದ್ರಿಸಲಾಗಿದೆ.


ಹತ್ತು ಹಲವು ಹಿರಿಯ ಅಧಿಕಾರಿಗಳು ಈ ಕಾಣಿಕೆಯನ್ನು ಗಮನಿಸಿದರು ಸಹ ಕನ್ನಡ ಭಾಷೆ ತಪ್ಪಾಗಿರುವುದು ಗಮನಿಸದಿರುವುದು ನಿಜಕ್ಕೂ ಆಶ್ಚರ್ಯವಾಗುತ್ತಿದೆ. ಇನ್ನಾದರು ಕೇವಲ ಕಾಟಾಚಾರಕ್ಕೆ ಜಿಲ್ಲಾಡಳಿತ ನೆನಪಿನ ಕಾಣಿಗಳನ್ನು ನೀಡಿ ಕೈತೊಳೆದುಕೊಳ್ಳದೆ ಗಮನ ಹರಿಸಿ ಕಾರ್ಯಕ್ರಮ ಆಯೋಜನೆ ಮಾಡಲಿ.


