"ಟ್ಯಾಬ್ಲೆಟ್ ರೂಪದಲ್ಲಿ ಚಿನ್ನ ಕಳ್ಳಸಾಗಣೆ..!
ದೇವನಹಳ್ಳಿ ಏರ್‌ಪೋರ್ಟ್‌ನಲ್ಲಿ 899 ಗ್ರಾಂ ಗೋಲ್ಡ್ ವಶ"
ಅಪರಾಧ
S3 Media House
6/10/20261 min read


ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಚಿನ್ನ ಕಳ್ಳಸಾಗಣೆ ಯತ್ನವನ್ನು ಭೇದಿಸಿದ್ದಾರೆ.
ದುಬೈನಿಂದ ಬಂದಿದ್ದ ಪ್ರಯಾಣಿಕನ ಬಳಿ ಟ್ಯಾಬ್ಲೆಟ್ ರೂಪದಲ್ಲಿ ಅಡಗಿಸಿಟ್ಟಿದ್ದ 24 ಕ್ಯಾರೆಟ್ ಚಿನ್ನದ ಬಿಸ್ಕೆಟ್‌ಗಳು ಪತ್ತೆಯಾಗಿವೆ.
ಒಟ್ಟು 899.50 ಗ್ರಾಂ ತೂಕದ ಚಿನ್ನವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಇದರ ಮೌಲ್ಯ ಸುಮಾರು 1.37 ಲಕ್ಷ ರೂಪಾಯಿಗಳೆಂದು ಅಂದಾಜಿಸಲಾಗಿದೆ.
ಶಂಕಿತ ಪ್ರಯಾಣಿಕನನ್ನು ಕಸ್ಟಮ್ಸ್ ಕಾಯ್ದೆಯಡಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದ್ದು, ಕಸ್ಟಮ್ಸ್ ಅಧಿಕಾರಿಗಳ ಎಚ್ಚರಿಕೆಯ ಕಾರ್ಯಾಚರಣೆಗೆ ಮತ್ತೊಂದು ಯಶಸ್ಸು ಸಿಕ್ಕಿದೆ.


