ಲಕ್ಷ್ಮೀ ದೇವತೆ ಕುರಿತ ಹೇಳಿಕೆ ವಿವಾದ: ಆರ್ಯವರ್ಧನ್ ವಿರುದ್ಧ ದೂರು

ಲಕ್ಷ್ಮೀ ದೇವತೆ ಹೇಳಿಕೆ ವಿವಾದ: ಶಂಕರಪುರಂ ಪೊಲೀಸರಿಂದ ಪರಿಶೀಲನೆ ಆರಂಭ

LATEST NEWSಧರ್ಮ & ಸಂಸ್ಕೃತಿಅಪರಾಧ

S3 Media House

7/4/20261 min read

ಲಕ್ಷ್ಮೀ ದೇವತೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಹೇಳಿಕೆ ವಿವಾದದ ಹಿನ್ನೆಲೆಯಲ್ಲಿ ಆರ್ಯವರ್ಧನ್ ವಿರುದ್ಧ ಬೆಂಗಳೂರಿನ ಶಂಕರಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕರ್ನಾಟಕ ಗೋವು ರಕ್ಷಕರ ಸೇನೆ ಪರವಾಗಿ ಸುಮನ್ ಎಂಬವರು ದೂರು ಸಲ್ಲಿಸಿದ್ದು, ದೇವತೆ ಕುರಿತು ಅವಹೇಳನಕಾರಿ ಹೇಳಿಕೆ ನೀಡಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿದ್ದಾರೆ ಹಾಗೂ ಮಹಿಳೆಯರ ಗೌರವಕ್ಕೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಆರ್ಯವರ್ಧನ್ ಅವರು ಸಂದರ್ಶನವೊಂದರಲ್ಲಿ ಲಕ್ಷ್ಮೀ ದೇವತೆಯ ಬಗ್ಗೆ ನೀಡಿದ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಒತ್ತಾಯಿಸಲಾಗಿದೆ.

ದೂರಿನ ಅನ್ವಯ ಶಂಕರಪುರಂ ಪೊಲೀಸರು ಪರಿಶೀಲನೆ ಆರಂಭಿಸಿದ್ದು, ಆರ್ಯವರ್ಧನ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಮೌಖಿಕವಾಗಿ ಸೂಚನೆ ನೀಡಿದ್ದಾರೆ.

ನಮ್ಮನ್ನು ಸಂಪರ್ಕಿಸಲು ದಯವಿಟ್ಟು ಈ ವಿವರಗಳನ್ನು ಬಳಸಿ

s3kannadanews@gmail.com

+91 9902544556

© 2026 S3 Media House. All Rights Reserved.

ನಮ್ಮ ನ್ಯೂಸ್ ಅಪ್ಡೇಟ್ಗಳಿಗಾಗಿ ಸಬ್ಸ್ಕ್ರೈಬ್ ಮಾಡಿ

ನಮ್ಮ ವಾಟ್ಸ್ ಆಪ್ ಚಾನೆಲ್ ಗೆ ಸೇರಲು ಈ ಬಟನ್ ಕ್ಲಿಕ್ ಮಾಡಿ ಕ್ಷಣ ಕ್ಷಣದ ಆಪ್ಡೆಟ್ ಪಡೆಯಿರಿ.