ಹೈಟೆಕ್ ಚಾಲಕರಹಿತ ಮೆಟ್ರೋ ಸೇವೆಗೆ ಕ್ಷಣಗಣನೆ!
LATEST NEWSಬೆಂಗಳೂರುತಂತ್ರಜ್ಞಾನ
S3 Media House
6/9/20261 min read


ಬೆಂಗಳೂರು ಮೆಟ್ರೋ ಇತಿಹಾಸದಲ್ಲಿ ಹೊಸ ಅಧ್ಯಾಯ ಆರಂಭವಾಗುತ್ತಿದೆ. ನಗರದ ಜನರ ಬಹುಕಾಲದ ನಿರೀಕ್ಷೆಯಾಗಿದ್ದ ಹೈಟೆಕ್ ಚಾಲಕರಹಿತ ಮೆಟ್ರೋ ಸೇವೆಗೆ ಕ್ಷಣಗಣನೆ ಆರಂಭವಾಗಿದೆ.
ಬ್ಲೂ ಲೈನ್ ಮಾರ್ಗದಲ್ಲಿ ಸಂಚರಿಸಲಿರುವ ಮೊದಲ ಚಾಲಕರಹಿತ ರೈಲು ಸೆಟ್ ಇದೀಗ ಬೈಯಪ್ಪನಹಳ್ಳಿ ಮೆಟ್ರೋ ಡಿಪೋಗೆ ಆಗಮಿಸಿದೆ.
ಸಿಲ್ಕ್ ಬೋರ್ಡ್ ಜಂಕ್ಷನ್‌ನಿಂದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದವರೆಗೆ ಸಂಪರ್ಕ ಕಲ್ಪಿಸಲಿರುವ ಈ ಬ್ಲೂ ಲೈನ್, ಒಟ್ಟು 58.19 ಕಿಲೋಮೀಟರ್ ಉದ್ದವನ್ನು ಹೊಂದಿದೆ.
ಈ ಮಹತ್ವಾಕಾಂಕ್ಷಿ ಯೋಜನೆಗಾಗಿ ಒಟ್ಟು 38 ಚಾಲಕರಹಿತ ರೈಲುಗಳ ಖರೀದಿಗೆ ಈಗಾಗಲೇ ಆದೇಶ ನೀಡಲಾಗಿದೆ.
ಬ್ಲೂ ಲೈನ್ ಮಾರ್ಗದಲ್ಲಿ ಒಟ್ಟು 30 ಮೆಟ್ರೋ ನಿಲ್ದಾಣಗಳು ನಿರ್ಮಾಣವಾಗಲಿವೆ. ಇದರಿಂದ ನಗರದ ಪೂರ್ವ ಭಾಗ ಮತ್ತು ವಿಮಾನ ನಿಲ್ದಾಣ ಸಂಪರ್ಕ ಮತ್ತಷ್ಟು ಸುಲಭವಾಗಲಿದೆ.
ಈ ವರ್ಷದೊಳಗೆ ಸಿಲ್ಕ್ ಬೋರ್ಡ್‌ನಿಂದ ಕೆ.ಆರ್. ಪುರಂವರೆಗಿನ ಮೊದಲ ಹಂತದ ಸೇವೆಯನ್ನು ಆರಂಭಿಸಲು ಬಿಎಂಆರ್‌ಸಿಎಲ್ ಸಿದ್ಧತೆ ನಡೆಸಿದೆ.
ಸೆಂಟ್ರಲ್ ಸಿಲ್ಕ್ ಬೋರ್ಡ್‌ನಿಂದ ಕೆ.ಆರ್. ಪುರಂವರೆಗಿನ 19.75 ಕಿಲೋಮೀಟರ್ ಉದ್ದದ ಮಾರ್ಗದಲ್ಲಿ 13 ಮೆಟ್ರೋ ನಿಲ್ದಾಣಗಳು ಇರಲಿವೆ.
ಇನ್ನು ಕೆ.ಆರ್. ಪುರಂನಿಂದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದವರೆಗಿನ 38.44 ಕಿಲೋಮೀಟರ್ ಮಾರ್ಗದಲ್ಲಿ 17 ಮೆಟ್ರೋ ನಿಲ್ದಾಣಗಳು ಕಾರ್ಯನಿರ್ವಹಿಸಲಿವೆ.
ಬೆಂಗಳೂರು ನಗರದ ಸಾರಿಗೆ ವ್ಯವಸ್ಥೆಗೆ ಹೊಸ ವೇಗ ಮತ್ತು ಹೊಸ ತಂತ್ರಜ್ಞಾನವನ್ನು ತರುವ ಈ ಚಾಲಕರಹಿತ ಬ್ಲೂ ಲೈನ್ ಮೆಟ್ರೋ ಸೇವೆಯತ್ತ ಇದೀಗ ಎಲ್ಲರ ಚಿತ್ತ ನೆಟ್ಟಿದೆ.


