ಕಾವೇರಿ ನೀರು ಹಂಚಿಕೆ ಕುರಿತು ಕೃಷ್ಣಾದಲ್ಲಿ ಸರ್ವಪಕ್ಷ ಸಭೆ; ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆ
ಕಾವೇರಿ ನದಿ ನೀರಿನ ಹಂಚಿಕೆ ಹಾಗೂ ಸಂಬಂಧಿತ ಸಮಸ್ಯೆಗಳ ಕುರಿತು ಚರ್ಚೆ
ಸಾರ್ವಜನಿಕ ಸಮಸ್ಯೆಗಳುರಾಜಕೀಯಬೆಂಗಳೂರುLATEST NEWS
S3 Media House
8/2/20261 min read


ಕಾವೇರಿ ನದಿ ನೀರಿನ ಹಂಚಿಕೆ ಹಾಗೂ ಸಂಬಂಧಿತ ಸಮಸ್ಯೆಗಳ ಕುರಿತು ಚರ್ಚಿಸಲು ಇಂದು ಕೃಷ್ಣಾದಲ್ಲಿ ಸರ್ವಪಕ್ಷ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಹಿಸಿದ್ದರು.
ಸಭೆಯಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಎಚ್.ಡಿ. ಕುಮಾರಸ್ವಾಮಿ, ಸದಾನಂದ ಗೌಡ ಹಾಗೂ ಬಸವರಾಜ ಬೊಮ್ಮಾಯಿ ಭಾಗವಹಿಸಿದ್ದರು. ಕೇಂದ್ರ ಸಚಿವರಾದ ವಿ. ಸೋಮಣ್ಣ ಮತ್ತು ಶೋಭಾ ಕರಂದ್ಲಾಜೆ ಕೂಡ ಸಭೆಯಲ್ಲಿ ಉಪಸ್ಥಿತರಿದ್ದರು.
ಉಪಮುಖ್ಯಮಂತ್ರಿ ಜಿ. ಪರಮೇಶ್ವರ, ಸಚಿವರಾದ ರಾಮಲಿಂಗಾ ರೆಡ್ಡಿ, ಕೃಷ್ಣ ಭೈರೇಗೌಡ, ಎಂ.ಬಿ. ಪಾಟೀಲ್, ಕೆ.ಜೆ. ಜಾರ್ಜ್ ಸೇರಿದಂತೆ ಹಲವು ಸಚಿವರು ಸಭೆಯಲ್ಲಿ ಭಾಗವಹಿಸಿದರು. ನವದೆಹಲಿಯಲ್ಲಿ ಕರ್ನಾಟಕದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಸಂಸತ್ ಸದಸ್ಯ ಗೋವಿಂದ ಕಾರಜೋಳ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಚಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಹಾಗೂ ಬಿ.ಕೆ. ಹರಿಪ್ರಸಾದ್ ಕೂಡ ಸಭೆಯಲ್ಲಿ ಹಾಜರಿದ್ದರು.
ಇದಲ್ಲದೆ ನಿವೃತ್ತ ನ್ಯಾಯಾಧೀಶ ನಾಗಮೋಹನದಾಸ್, ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಮುಖ್ಯಮಂತ್ರಿಯವರ ವಿಶೇಷ ಸಲಹೆಗಾರ ಜಿ.ಸಿ. ಚಂದ್ರಶೇಖರ್, ಆರ್ಥಿಕ ಸಲಹೆಗಾರ ಎಲ್.ಕೆ. ಅತೀಕ್ ಹಾಗೂ ಅಪರ ಮುಖ್ಯಕಾರ್ಯದರ್ಶಿ ತುಷಾರ್ ಗಿರಿನಾಥ್ ಸೇರಿದಂತೆ ಹಿರಿಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಕಾವೇರಿ ನೀರಿನ ಹಂಚಿಕೆ, ಜಲಾಶಯಗಳ ಸ್ಥಿತಿ ಹಾಗೂ ಮುಂದಿನ ನೀರಿನ ನಿರ್ವಹಣಾ ಕ್ರಮಗಳ ಕುರಿತು ಸಭೆಯಲ್ಲಿ ಸವಿಸ್ತಾರವಾಗಿ ಚರ್ಚೆ ನಡೆಯಿತು ಎಂದು ಮೂಲಗಳು ತಿಳಿಸಿವೆ.


