ರಾಷ್ಟ್ರೀಯ ಹೆದ್ದಾರಿ 648ರಲ್ಲಿ ಸರಣಿ ಅಪಘಾತ; ಸಿಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ

ದೇವನಹಳ್ಳಿ ಬಳಿ ಎರಡು ಕಾರು-ಬೈಕ್ ನಡುವೆ ಭೀಕರ ಡಿಕ್ಕಿ

LATEST NEWSಅಪಘಾತ

S3 Media House

6/29/20261 min read

ಮಂತ್ರಾಲಯದಲ್ಲಿ ರಾಯರ ದರ್ಶನ ಮುಗಿಸಿಕೊಂಡು ಬೆಂಗಳೂರಿನತ್ತ ಬರುತ್ತಿದ್ದ ಪ್ರಯಾಣಿಕರ ಕಾರು ರಾಷ್ಟ್ರೀಯ ಹೆದ್ದಾರಿ 648ರಲ್ಲಿ ಭೀಕರ ಅಪಘಾತಕ್ಕೀಡಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಸಾವಕನಹಳ್ಳಿ ಸಮೀಪ ಈ ಸರಣಿ ಅಪಘಾತ ಸಂಭವಿಸಿದೆ.

ಮುಂದೆ ಸಾಗುತ್ತಿದ್ದ ಬೈಕ್‌ಗೆ ಮೊದಲಿಗೆ ಕಾರು ಡಿಕ್ಕಿ ಹೊಡೆದಿದ್ದು, ಬಳಿಕ ನಿಯಂತ್ರಣ ತಪ್ಪಿದ ಕಾರು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಎರಡು ಕಾರು ಹಾಗೂ ಒಂದು ಬೈಕ್ ನಡುವೆ ಈ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಬೈಕ್ ಸವಾರನ ಕಾಲು ಕಟ್ ಆಗಿದ್ದು, ಗಂಭೀರವಾಗಿ ಗಾಯಗೊಂಡ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಎದೆ ಝಲ್ ಎನಿಸುವ ಈ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನಾ ಸ್ಥಳಕ್ಕೆ ವಿಶ್ವನಾಥಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ನಮ್ಮನ್ನು ಸಂಪರ್ಕಿಸಲು ದಯವಿಟ್ಟು ಈ ವಿವರಗಳನ್ನು ಬಳಸಿ

s3kannadanews@gmail.com

+91 9902544556

© 2026 S3 Media House. All Rights Reserved.

ನಮ್ಮ ನ್ಯೂಸ್ ಅಪ್ಡೇಟ್ಗಳಿಗಾಗಿ ಸಬ್ಸ್ಕ್ರೈಬ್ ಮಾಡಿ

ನಮ್ಮ ವಾಟ್ಸ್ ಆಪ್ ಚಾನೆಲ್ ಗೆ ಸೇರಲು ಈ ಬಟನ್ ಕ್ಲಿಕ್ ಮಾಡಿ ಕ್ಷಣ ಕ್ಷಣದ ಆಪ್ಡೆಟ್ ಪಡೆಯಿರಿ.