ದೇವನಹಳ್ಳಿ ಜೆಡಿಎಸ್ ಮಹಿಳಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ

ಮಹಿಳಾ ಶಕ್ತಿಯೇ ನಮ್ಮ ಪಕ್ಷದ ಜೀವಾಳ ನಿಸರ್ಗ ನಾರಾಯಣಸ್ವಾಮಿ

ಬೆಂಗಳೂರು ಗ್ರಾಮಾಂತರರಾಜಕೀಯ

S3 Media House

6/24/20261 min read

ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಾದೇಶಿಕ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ, ಜೆಡಿಎಸ್ ನೂತನ ಮಹಿಳಾ ಘಟಕದ ಪದಾಧಿಕಾರಿಗಳ ನೇಮಕಾತಿಯನ್ನು ಅಧಿಕೃತವಾಗಿ ಘೋಷಿಸಲಾಯಿತು. ನೂತನ ಮಹಿಳಾ ಘಟಕದ ಅಧ್ಯಕ್ಷರಾಗಿ ಮೀನಾಕ್ಷಿ ಮುನಿಕೃಷ್ಣಪ್ಪ, ಕಾರ್ಯಾಧ್ಯಕ್ಷರಾಗಿ ಬಿ.ಪಿ. ಭಾಗ್ಯಮ್ಮ ಬೀರಪ್ಪ ಹಾಗೂ ಮಹಾಪ್ರಧಾನ ಕಾರ್ಯದರ್ಶಿಯಾಗಿ ಕೆ.ಬಿ. ಶೈಲಜಾ ಮಾರೇಗೌಡ ಅಧಿಕಾರ ವಹಿಸಿಕೊಂಡರು.

ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ ಸಮ್ಮುಖದಲ್ಲಿ, ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಕೆ.ವಿ. ಮಂಜುನಾಥ್ ಹಾಗೂ ದೇವನಹಳ್ಳಿ ತಾಲೂಕು ಅಧ್ಯಕ್ಷರಾದ ಮಹೇಶ್ ನೂತನ ಪದಾಧಿಕಾರಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಿ ಶುಭ ಹಾರೈಸಿದರು.

ಮಹಿಳಾ ಶಕ್ತಿಯೇ ನಮ್ಮ ಪಕ್ಷದ ಜೀವಾಳವಾಗಿದ್ದು, ನೂತನ ಪದಾಧಿಕಾರಿಗಳ ಸಮರ್ಥ ನೇತೃತ್ವದಲ್ಲಿ ದೇವನಹಳ್ಳಿಯಲ್ಲಿ ಜೆಡಿಎಸ್ ಮಹಿಳಾ ಘಟಕವು ಮುಂಬರುವ ದಿನಗಳಲ್ಲಿ ಮತ್ತಷ್ಟು ಜನಪರ ಕಾರ್ಯಕ್ರಮಗಳೊಂದಿಗೆ ಯಶಸ್ವಿಯಾಗಿ ಮುನ್ನಡೆಯಲಿ ಎಂದು ಮುಖಂಡರು ಆಶಿಸಿದರು. ಸಂದರ್ಭದಲ್ಲಿ ತಾಲೂಕಿನ ಹಿರಿಯ ಮುಖಂಡರುಗಳು ಹಾಗೂ ನೂರಾರು ಮಹಿಳಾ ಕಾರ್ಯಕರ್ತೆಯರು ಉಪಸ್ಥಿತರಿದ್ದು.

ನಮ್ಮನ್ನು ಸಂಪರ್ಕಿಸಲು ದಯವಿಟ್ಟು ಈ ವಿವರಗಳನ್ನು ಬಳಸಿ

s3kannadanews@gmail.com

+91 9902544556

© 2026 S3 Media House. All Rights Reserved.

ನಮ್ಮ ನ್ಯೂಸ್ ಅಪ್ಡೇಟ್ಗಳಿಗಾಗಿ ಸಬ್ಸ್ಕ್ರೈಬ್ ಮಾಡಿ

ನಮ್ಮ ವಾಟ್ಸ್ ಆಪ್ ಚಾನೆಲ್ ಗೆ ಸೇರಲು ಈ ಬಟನ್ ಕ್ಲಿಕ್ ಮಾಡಿ ಕ್ಷಣ ಕ್ಷಣದ ಆಪ್ಡೆಟ್ ಪಡೆಯಿರಿ.