ವಿದ್ಯಾರ್ಥಿಗಳ ಸಮಸ್ಯೆ ಪರಿಹಾರಕ್ಕೆ ಸಚಿವ ಸಂಪುಟ ಉಪಸಮಿತಿ ರಚನೆ!
ರಾಜ್ಯLATEST NEWSಶಿಕ್ಷಣ
S3 Media House
8/27/20261 min read


ಹೌದು, ವಿದ್ಯಾರ್ಥಿಗಳ ಸಮಸ್ಯೆ ಪರಿಹಾರ, ಶಿಕ್ಷಣ ಸುಧಾರಣೆಗೆ ಸಚಿವ ಸಂಪುಟ ಉಪಸಮಿತಿ ರಚನೆ ಮಾಡಲಾಗಿದೆ. ಈ ಉಪಸಮಿತಿಗೆ ಆರೋಗ್ಯ ಸಚಿವ ಯು.ಟಿ.ಖಾದರ್ ಅಧ್ಯಕ್ಷರಾಗಿ ನೇಮಕವಾಗಿದ್ದರೆ. ಬಸವರಾಜ ರಾಯರೆಡ್ಡಿ, ಪ್ರಿಯಾಂಕ್ ಖರ್ಗೆ, ಶರಣ ಪ್ರಕಾಶ್ ಪಾಟೀಲ್ ಮತ್ತು ಮಧು ಬಂಗಾರಪ್ಪ ಸದಸ್ಯರಾಗಿ ನೇಮಕ ಮಾಡಲಾಗಿದೆ.
ಇನ್ನು ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕಲು ಹಾಗೂ ನೇಮಕಾತಿಯಲ್ಲಿ ಪಾರದರ್ಶಕತೆ, ಖಾಸಗಿ ಶಿಕ್ಷಣ ಸಂಸ್ಥೆಗಳ ಶುಲ್ಕ ನಿಯಂತ್ರಣಕ್ಕೆ ಒತ್ತು ನೀಡುವಲ್ಲಿ ಈ ಸಮಿತಿ ಕಾರ್ಯ ನಿರ್ವಹಿಸಲಿದ್ದು, ಜೊತೆಗೆ ಕೋಚಿಂಗ್ ಕೇಂದ್ರಗಳ ಮೇಲ್ವಿಚಾರಣೆ ಹಾಗೂ ನಿಯಂತ್ರಣ, ಸರ್ಕಾರಿ ಶಾಲೆ, ಪಿಯು ಕಾಲೇಜು, ವಿಶ್ವವಿದ್ಯಾಲಯಗಳ ಮೂಲಸೌಕರ್ಯ ಸುಧಾರಣೆ , ಶಿಕ್ಷಕರ ಕೊರತೆ ನಿವಾರಣೆ, ಪ್ರಯೋಗಾಲಯ, ಗ್ರಂಥಾಲಯ, ಹಾಸ್ಟೆಲ್ ಅಭಿವೃದ್ಧಿಗೆ ಒತ್ತು ಸೇರಿದಂತೆ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಹತ್ತು ಹಲವು ವಿಚಾರಗಳ ಕುರಿತು ಅಧ್ಯಯನ ನಡೆಸಿ ಸರಕಾರಕ್ಕೆ ವರದಿ ಸಲ್ಲಿಸಲಿದೆ.


