ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶಿಕ್ಷಣಉಪಯುಕ್ತ

S3 Media House

6/5/20261 min read

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ ಮೇಲೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ, ಡಾ| ಬಿ.ಆರ್.ಅಂಬೇಡ್ಕರ್, ಶ್ರೀಮತಿ ಇಂದಿರಾ ಗಾಂಧಿ/ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಲ್ಲಿ ಕನ್ನಡ, ಇಂಗ್ಲೀಷ್, ಹಿಂದಿ, ಗಣಿತ, ವಿಜ್ಞಾನ, ದೈಹಿಕ ಶಿಕ್ಷಕರು, ಸಮಾಜ ವಿಜ್ಞಾನ ಮತ್ತು ಗಣಕಯಂತ್ರ ವಿಷಯಗಳಲ್ಲಿ ವಿದ್ಯಾರ್ಹತೆ ಹಾಗೂ ಪರಿಣತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಜೂ. 10 ರವರೆಗೆ ಅವಕಾವಿದ್ದು ಹೆಚ್ಚಿನ ಮಾಹಿತಿಗಾಗಿ ದೂ. ಸಂಖ್ಯೆ: 9845308319 ಗೆ ಸಂಪರ್ಕಿಸಲು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಮ್ಮನ್ನು ಸಂಪರ್ಕಿಸಲು ದಯವಿಟ್ಟು ಈ ವಿವರಗಳನ್ನು ಬಳಸಿ

s3kannadanews@gmail.com

+91 9902544556

© 2026 S3 Media House. All Rights Reserved.

ನಮ್ಮ ನ್ಯೂಸ್ ಅಪ್ಡೇಟ್ಗಳಿಗಾಗಿ ಸಬ್ಸ್ಕ್ರೈಬ್ ಮಾಡಿ

ನಮ್ಮ ವಾಟ್ಸ್ ಆಪ್ ಚಾನೆಲ್ ಗೆ ಸೇರಲು ಈ ಬಟನ್ ಕ್ಲಿಕ್ ಮಾಡಿ ಕ್ಷಣ ಕ್ಷಣದ ಆಪ್ಡೆಟ್ ಪಡೆಯಿರಿ.