ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಜನ್ಮದಿನ ಅದ್ಧೂರಿ ಆಚರಣೆ

ಬೃಹತ್​ ನಾಣ್ಯದ ಹಾರ, ಕೇಕ್​, ಲಯನ್ಸ್​ ಸಂಸ್ಥೆಗೆ ವಾಹನ

ಬೆಂಗಳೂರು ಗ್ರಾಮಾಂತರರಾಜಕೀಯ

S3 Media House

6/24/20261 min read

ದೇವನಹಳ್ಳಿ: ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ನಿಕಟಪೂರ್ವ ಶಾಸಕ ನಿಸರ್ಗ ನಾರಾಯಣಸ್ವಾಮಿ ಹುಟ್ಟುಹಬ್ಬದ ಪ್ರಯುಕ್ತ ದೇವನಹಳ್ಳಿಯ ಶಾಂತಿನಗರದಲ್ಲಿರುವ ಗೃಹ ಕಚೇರಿ ಬಳಿ ಜೆಡಿಎಸ್ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ವಿವಿಧ ಜನಪರ ಹಾಗೂ ವಿಶೇಷ ಕಾರ್ಯಕ್ರಮಗಳು ಯಶಸ್ವಿಯಾಗಿ ಜರುಗಿದವು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕೆ.ವಿ. ಮಂಜುನಾಥ್, ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಎಸ್. ಮಹೇಶ್ ಸೇರಿದಂತೆ ಪಕ್ಷದ ನೂರಾರು ಮುಖಂಡರು ಹಾಗೂ ಸಾವಿರಾರು ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದರು.​

ನೆಚ್ಚಿನ ನಾಯಕನ ಜನ್ಮದಿನವನ್ನು ಕಾರ್ಯಕರ್ತರು ಸಡಗರ-ಸಂಭ್ರಮದಿಂದ ಆಚರಿಸಿದರು. ಇದೇ ಸಂದರ್ಭದಲ್ಲಿ ನಿಸರ್ಗ ನಾರಾಯಣಸ್ವಾಮಿ ಹಾರಗಳನ್ನು ಹಾಕಿ ಅಭಿನಂದಿಸಲಾಯಿತು. ವಿಶೇಷವಾಗಿ ನಾಣ್ಯಗಳಿಂದ ಸಿದ್ಧಪಡಿಸಲಾಗಿದ್ದ ಬೃಹತ್ ಹಾರವನ್ನು ಹಾಕುವ ಮೂಲಕ ಕಾರ್ಯಕರ್ತರು ತಮ್ಮ ಅಭಿಮಾನವನ್ನು ಮೆರೆದರು.

ನಮ್ಮನ್ನು ಸಂಪರ್ಕಿಸಲು ದಯವಿಟ್ಟು ಈ ವಿವರಗಳನ್ನು ಬಳಸಿ

s3kannadanews@gmail.com

+91 9902544556

© 2026 S3 Media House. All Rights Reserved.

ನಮ್ಮ ನ್ಯೂಸ್ ಅಪ್ಡೇಟ್ಗಳಿಗಾಗಿ ಸಬ್ಸ್ಕ್ರೈಬ್ ಮಾಡಿ

ನಮ್ಮ ವಾಟ್ಸ್ ಆಪ್ ಚಾನೆಲ್ ಗೆ ಸೇರಲು ಈ ಬಟನ್ ಕ್ಲಿಕ್ ಮಾಡಿ ಕ್ಷಣ ಕ್ಷಣದ ಆಪ್ಡೆಟ್ ಪಡೆಯಿರಿ.