ಬಿ ಅಲರ್ಟ್ ಜೂನ್ 9 ರವರೆಗೆ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ!

ಜೂನ್ 9 ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಉಪಯುಕ್ತ

S3 Media House

6/3/20261 min read

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜೂನ್ 3 ನಂತರ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಅಂತಾ ರಾಜ್ಯ ಹವಾಮಾನ ಇಲಾಖೆ ಹೇಳಿದೆ. ಜೂನ್ 9 ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಶೇ.50ಕ್ಕಿಂತ ಕಡಿಮೆ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಕೆಲವೆಡೆ ಭಾರೀ ಮಳೆಯೊಂದಿಗೆ ಬಿರುಗಾಳಿ ಬೀಸಲಿದೆ. ಪ್ರತಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಕರಾವಳಿ, ಉತ್ತರ ಹಾಗೂ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚಿನ ಜೊತೆಗೆ ಕೆಲವೆಡೆ ಆಲಿಕಲ್ಲು ಮಳೆಯಾಗಬಹುದು. ಚಿಕ್ಕಮಗಳೂರು, ಹಾಸನ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಹಾವೇರಿ, ಬೆಳಗಾವಿ, ಮೈಸೂರು, ಮಂಡ್ಯ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಭಾರೀ ಮಳೆ ಆಗಬಹುದು. ಬೆಂಗಳೂರು ನಗರದಲ್ಲಿಯೂ ಮುಂದಿನ ವಾರದಿಂದ ಮಳೆಯ ಪ್ರಮಾಣ ಹೆಚ್ಚಾಗಲಿದೆ ಅಂತಾ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.

ನಮ್ಮನ್ನು ಸಂಪರ್ಕಿಸಲು ದಯವಿಟ್ಟು ಈ ವಿವರಗಳನ್ನು ಬಳಸಿ

s3kannadanews@gmail.com

+91 9902544556

© 2026 S3 Media House. All Rights Reserved.

ನಮ್ಮ ನ್ಯೂಸ್ ಅಪ್ಡೇಟ್ಗಳಿಗಾಗಿ ಸಬ್ಸ್ಕ್ರೈಬ್ ಮಾಡಿ

ನಮ್ಮ ವಾಟ್ಸ್ ಆಪ್ ಚಾನೆಲ್ ಗೆ ಸೇರಲು ಈ ಬಟನ್ ಕ್ಲಿಕ್ ಮಾಡಿ ಕ್ಷಣ ಕ್ಷಣದ ಆಪ್ಡೆಟ್ ಪಡೆಯಿರಿ.