ಮಂಡ್ಯ ರೈತರ ಹೋರಾಟಕ್ಕೆ ಮಣಿದ ಸರ್ಕಾರ: ಒಣಗಿ ನಿಂತ ಬೆಳೆಗಳಿಗೆ ನೀರು ಬಿಡುಗಡೆಗೆ ನಿರ್ಧಾರ
ಇಂದು ಬೆಂಗಳೂರಿನಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನಿರ್ಧಾರ
ಸಾರ್ವಜನಿಕ ಸಮಸ್ಯೆಗಳುಬೆಂಗಳೂರುLATEST NEWS
S3 Media House
7/10/20261 min read


ಮಂಡ್ಯ ಜಿಲ್ಲೆಯ ರೈತರ ನಿರಂತರ ಹೋರಾಟ ಹಾಗೂ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ಜಿಲ್ಲೆಯ ಒಣಗಿ ನಿಂತಿರುವ ಬೆಳೆಗಳಿಗೆ ನೀರು ಒದಗಿಸಲು ಮಹತ್ವದ ನಿರ್ಧಾರ ಕೈಗೊಂಡಿದೆ.
ಇಂದು ಬೆಂಗಳೂರಿನಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ, ಕೆಆರ್‌ಎಸ್ (KRS) ಅಣೆಕಟ್ಟಿನಿಂದ ಜಿಲ್ಲೆಯ ವಿಸಿ ನಾಲೆಗಳ ಮೂಲಕ ರೈತರ ಬೆಳೆಗಳಿಗೆ ನೀರು ಹರಿಸಲು ಸಮ್ಮತಿ ಸೂಚಿಸಲಾಗಿದೆ.
ಸಚಿವ ರಾಮಲಿಂಗಾರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೀರು ಬಿಡುಗಡೆ ಮಾಡುವ ಕುರಿತು ಅಧಿಕೃತ ನಿರ್ಣಯ ಕೈಗೊಳ್ಳಲಾಯಿತು.
ಸಭೆಯಲ್ಲಿ ಮಂಡ್ಯ ಜಿಲ್ಲಾ ವಿಧಾನ ಪರಿಷತ್ ಸದಸ್ಯ ಕೆ. ವಿವೇಕಾನಂದ, ಶಾಸಕರಾದ ದಿನೇಶ್ ಗೂಳಿಗೌಡ, ಗಣಿಗ ರವಿಕುಮಾರ್, ರಮೇಶ್ ಬಾಬು ಬಂಡಿಸಿದ್ದೇಗೌಡ, ಕೆ. ಉದಯ್ ಸೇರಿದಂತೆ ಹಲವರು ಭಾಗವಹಿಸಿದ್ದರು.


