ನಾಡಪ್ರಭು ಕೆಂಪೇಗೌಡರ 517ನೇ ಜನ್ಮ ದಿನೋತ್ಸವದ ಆಹ್ವಾನ ಪತ್ರ ಬಿಡುಗಡೆ
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ ಕೆಂಪೇಗೌಡರ ಪ್ರತಿಮೆ ಮುಂಭಾಗದಲ್ಲಿ ಕಾರ್ಯಕ್ರಮದ ಆಹ್ವಾನ ಪತ್ರಿಕೆ ಬಿಡುಗಡೆ
ರಾಜಕೀಯ
S3 Media House
6/24/20261 min read


ನಾಡಪ್ರಭು ಕೆಂಪೇಗೌಡರ 517ನೇ ಜನ್ಮ ದಿನೋತ್ಸವದ ಅಂಗವಾಗಿ, ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ ಕೆಂಪೇಗೌಡರ ಪ್ರತಿಮೆ ಮುಂಭಾಗದಲ್ಲಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು.
ಮಾಜಿ ಸಚಿವ ಅಶ್ವಥ್ ನಾರಾಯಣ್ ಹಾಗೂ ಕೆಂಪೇಗೌಡ ಪ್ರತಿಷ್ಠಾನದ ಅಧ್ಯಕ್ಷರ ನೇತೃತ್ವದಲ್ಲಿ ಈ ಆಹ್ವಾನ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು. ಜೂನ್ 27ರಂದು ಜ್ಞಾನ ಜ್ಯೋತಿ ಸಭಾಂಗಣದಲ್ಲಿ ನಡೆಯಲಿರುವ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ವಿವಿಧ ಮಠಾಧೀಶರು, ರಾಜಕೀಯ ನಾಯಕರು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ.
ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಗುವುದು. ಜೊತೆಗೆ ಕೆಂಪೇಗೌಡರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸುವ ಸಿದ್ಧತೆಗಳು ನಡೆಯುತ್ತಿವೆ.
ಆಹ್ವಾನ ಪತ್ರಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಒಕ್ಕಲಿಗ ಸಮುದಾಯದ ಮುಖಂಡರು, ಸಾರ್ವಜನಿಕರು ಹಾಗೂ ಅಭಿಮಾನಿಗಳು ಭಾಗವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.


