ಏರ್ಪೋರ್ಟ್ ನಲ್ಲಿ ಕೆಹೆಚ್ ಮುನಿಯಪ್ಪ ಮಹತ್ವದ ಹೇಳಿಕೆ!

ರಾಜಕೀಯLATEST NEWS

S3 Media House

6/9/20261 min read

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಸಚಿವ ಕೆ.ಹೆಚ್. ಮುನಿಯಪ್ಪ ಮಹತ್ವದ ಹೇಳಿಕೆ ನೀಡಿದ್ದಾರೆ.

ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಕಾಯುತ್ತಿದ್ದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಾವು ಈಗಾಗಲೇ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರ ಸ್ವೀಕಾರ ಮಾಡಿದ್ದು, ಅಧಿಕಾರಿಗಳ ಸಭೆಯನ್ನೂ ನಡೆಸಿದ್ದೇನೆ ಎಂದು ತಿಳಿಸಿದ್ದಾರೆ.

ಖಾತೆ ಬದಲಾವಣೆ ಕುರಿತಾಗಿ ಹೈಕಮಾಂಡ್‌ಗೆ ಮನವರಿಕೆ ಮಾಡಿಕೊಟ್ಟಿದ್ದೇನೆ. ಈ ವಿಷಯವನ್ನು ರಾಹುಲ್ ಗಾಂಧಿ ಅವರ ಗಮನಕ್ಕೂ ತಂದಿದ್ದೇನೆ ಎಂದು ಮುನಿಯಪ್ಪ ಹೇಳಿದ್ದಾರೆ.

ಹೈಕಮಾಂಡ್ ಏನು ತೀರ್ಮಾನ ಕೈಗೊಳ್ಳುತ್ತದೆಯೋ ಅದನ್ನು ನಾನು ಪಾಲಿಸುತ್ತೇನೆ. ನಾನು ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿ ಎಂದು ಸ್ಪಷ್ಟಪಡಿಸಿದ್ದಾರೆ.

ಇದೇ ವೇಳೆ, ತಮ್ಮನ್ನು ಡಿಸಿಎಂ ಮಾಡಬೇಕು ಎಂಬ ಬೇಡಿಕೆಯನ್ನು ಕಾರ್ಯಕರ್ತರು ಮುಂದಿಟ್ಟಿದ್ದಾರೆ. ಅದು ಅವರ ಇಚ್ಛೆ ಎಂದು ಮುನಿಯಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ಇನ್ನೂ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುವ ನಿರೀಕ್ಷೆಯಲ್ಲಿದ್ದೇನೆ ಎಂದು ಹೇಳಿದ ಬಳಿಕ, ಕೆ.ಹೆಚ್. ಮುನಿಯಪ್ಪ ಮತ್ತೆ ವಿಮಾನ ನಿಲ್ದಾಣದ ಲಾಂಜ್ ಒಳಗೆ ತೆರಳಿದರು.

ನಮ್ಮನ್ನು ಸಂಪರ್ಕಿಸಲು ದಯವಿಟ್ಟು ಈ ವಿವರಗಳನ್ನು ಬಳಸಿ

s3kannadanews@gmail.com

+91 9902544556

© 2026 S3 Media House. All Rights Reserved.

ನಮ್ಮ ನ್ಯೂಸ್ ಅಪ್ಡೇಟ್ಗಳಿಗಾಗಿ ಸಬ್ಸ್ಕ್ರೈಬ್ ಮಾಡಿ

ನಮ್ಮ ವಾಟ್ಸ್ ಆಪ್ ಚಾನೆಲ್ ಗೆ ಸೇರಲು ಈ ಬಟನ್ ಕ್ಲಿಕ್ ಮಾಡಿ ಕ್ಷಣ ಕ್ಷಣದ ಆಪ್ಡೆಟ್ ಪಡೆಯಿರಿ.