ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್!

ರಾಜ್ಯLATEST NEWS

8/25/20261 min read

ಶಾಸಕ ವಿನಯ್ ಕುಲಕರ್ಣಿಗೆ ನ್ಯಾಯಾಲಯ ಇಂದು ಬಿಗ್ ರಿಲೀಫ್ ನೀಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಿಗ್ ರಿಲೀಫ್ ನೀಡಿದ್ದು, ಧಾರವಾಡಕ್ಕೆ ಎಂಟ್ರಿ ಕೊಡಬಾರದು ಎಂದಿದ್ದು ಷರತ್ತನ್ನು ಸಡಿಲಗೊಳಿಸಿ ಆದೇಶ ಹೊರಡಿಸಿದೆ.

ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಸಾಕ್ಷ್ಯ ನಾಶ ಮಾಡುವ ಸಂಭವವಿದೆ ಎಂದು ಭಾವಿಸಿದ್ದ ನ್ಯಾಯಾಲಯ ಧಾರವಾಡಕ್ಕೆ ಎಂಟ್ರಿ ಕೊಡುವುದು ತಡೆ ಹಿಡಿದಿತ್ತು. ಈ ಆದೇಶವನ್ನು ರದ್ದು ಮಾಡಬೇಕು ಎಂದು ಕುಲಕರ್ಣಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಕೋರ್ಟ್ ಧಾರವಾಡಕ್ಕಿದ್ದ ನೋ ಎಂಟ್ರಿಯನ್ನು ರದ್ದು ಮಾಡಿ ಆದೇಶ ಹೊರಡಿಸಿದೆ. ಇದರಿಂದ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ.

ನಮ್ಮನ್ನು ಸಂಪರ್ಕಿಸಲು ದಯವಿಟ್ಟು ಈ ವಿವರಗಳನ್ನು ಬಳಸಿ

s3kannadanews@gmail.com

+91 9902544556

© 2026 S3 Media House. All Rights Reserved.

ನಮ್ಮ ನ್ಯೂಸ್ ಅಪ್ಡೇಟ್ಗಳಿಗಾಗಿ ಸಬ್ಸ್ಕ್ರೈಬ್ ಮಾಡಿ

ನಮ್ಮ ವಾಟ್ಸ್ ಆಪ್ ಚಾನೆಲ್ ಗೆ ಸೇರಲು ಈ ಬಟನ್ ಕ್ಲಿಕ್ ಮಾಡಿ ಕ್ಷಣ ಕ್ಷಣದ ಆಪ್ಡೆಟ್ ಪಡೆಯಿರಿ.