ಲಕ್ಷಾಂತರ ನಗದು-ಚಿನ್ನ ಪತ್ತೆ: ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ
LATEST NEWSಅಪರಾಧ
S3 Media House
6/16/20261 min read


ದಾವಣಗೆರೆಯಲ್ಲಿ ಭ್ರಷ್ಟಾಚಾರ ವಿರುದ್ಧ ಲೋಕಾಯುಕ್ತ ಭರ್ಜರಿ ಕಾರ್ಯಾಚರಣೆ ನಡೆಸಿದೆ.
ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಕೃಷ್ಣಾ ನಾಯ್ಕ್, ಉತ್ತರ ಪಶ್ಚಿಮ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಯಾಂತ್ರಿಕ ಮೆಕ್ಯಾನಿಕಲ್ ಇಂಜಿನಿಯರ್ ಸಿದ್ದೇಶ್ವರ ಹೆಬ್ಬಾಳ್ ಹಾಗೂ ಕೆಆರ್‌ಐಡಿಎಲ್ ಅಧೀಕ್ಷಕ ಇಂಜಿನಿಯರ್ ಸಣ್ಣ ಕೆಂಚಪ್ಪ ಅವರ ನಿವಾಸ ಮತ್ತು ಕಚೇರಿಗಳನ್ನು ಪರಿಶೀಲಿಸಲಾಗಿದೆ.
ದಾವಣಗೆರೆ, ಬೆಳಗಾವಿ, ಹುಬ್ಬಳ್ಳಿ ಮತ್ತು ವಿಜಯನಗರ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಒಟ್ಟು ಹನ್ನೆರಡು ತಂಡಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿವೆ.
ಲೋಕಾಯುಕ್ತ ಎಸ್‌ಪಿ ಎಂ.ಎಸ್. ಕೌಲಾಪುರ ನೇತೃತ್ವದಲ್ಲಿ ನಡೆದ ಈ ದಾಳಿಯ ವೇಳೆ, ಸಿದ್ದೇಶ್ವರ ಹೆಬ್ಬಾಳ್ ಅವರ ನಿವಾಸದಲ್ಲಿ ಲಕ್ಷಾಂತರ ರೂಪಾಯಿ ನಗದು, ಚಿನ್ನ ಹಾಗೂ ಬೆಳ್ಳಿ ಆಭರಣಗಳು ಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ.
ಇದೀಗ ಅಧಿಕಾರಿಗಳು ದಾಖಲೆಗಳು, ಆಸ್ತಿ ವಿವರಗಳು ಮತ್ತು ಬ್ಯಾಂಕ್ ವ್ಯವಹಾರಗಳ ಕುರಿತಂತೆ ಸವಿಸ್ತಾರ ಪರಿಶೀಲನೆ ನಡೆಸುತ್ತಿದ್ದಾರೆ.
ಈ ದಾಳಿ ಭ್ರಷ್ಟಾಚಾರದ ವಿರುದ್ಧದ ಹೋರಾಟದಲ್ಲಿ ಮಹತ್ವದ ಹೆಜ್ಜೆಯಾಗಿ ಪರಿಗಣಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಮ್ಮೊಂದಿಗೆ ಇರಿ. S3 Kannada News.


