22 ದಿನಗಳಲ್ಲಿ ಮಂತ್ರಾಲಯದ ಹುಂಡಿಯಲ್ಲಿ ದೊರೆತ ಕಾಣಿಕೆಯೆಷ್ಟು ಗೊತ್ತಾ? ಕೇಳಿದ್ರೆ ನೀವು ಶಾಕ್ ಆಗೋದು ಗ್ಯಾರೆಂಟಿ!

LATEST NEWSರಾಜ್ಯಧರ್ಮ & ಸಂಸ್ಕೃತಿ

S3 Media House

10/2/20261 min read

ಹೌದು, ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಸೆಪ್ಟೆಂಬರ್ ತಿಂಗಳ ಹುಂಡಿ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಕೇವಲ 22 ದಿನಗಳ ಅವಧಿಯಲ್ಲಿ ರಾಘವೇಂದ್ರಸ್ವಾಮಿಗೆ ಅಪಾರ ಪ್ರಮಾಣದ ಕಾಣಿಕೆ ಹರಿದು ಬಂದಿದೆ.

22 ದಿನಗಳ ಅವಧಿಯಲ್ಲಿ ಬರೋಬ್ಬರಿ 3 ಕೋಟಿ 4 ಲಕ್ಷ 37,906 ರೂ. ಕಾಣಿಕೆ ಸಂಗ್ರಹವಾಗಿದೆ. ಪ್ರತಿ ತಿಂಗಳಿನಂತೆ ಈ ಬಾರಿಯೂ ಮಂತ್ರಾಲಯಕ್ಕೆ ಭಕ್ತರ ದಂಡು ಹರಿದು ಬಂದಿದ್ದು, ರಾಯರ ದರ್ಶನ ಪಡೆದ ಭಕ್ತರು ಹುಂಡಿಗೆ ಭಾರೀ ಪ್ರಮಾಣದಲ್ಲಿ ಕಾಣಿಕೆ ಹಾಕಿದ್ದಾರೆ.

ಒಟ್ಟು ಸಂಗ್ರಹವಾದ ಕಾಣಿಕೆಯಲ್ಲಿ 2 ಕೋಟಿ 96 ಲಕ್ಷ 7,906 ರೂ. ನಗದು ರೂಪದಲ್ಲಿ ಬಂದಿದೆ. ಇನ್ನು 8 ಲಕ್ಷ 30 ಸಾವಿರ ಮೌಲ್ಯದ ನಾಣ್ಯಗಳು ಸಂಗ್ರಹವಾಗಿವೆ. ಇದರ ಜೊತೆಗೆ ಭಕ್ತರು ಕಾಣಿಕೆ ರೂಪದಲ್ಲಿ 48 ಗ್ರಾಂ ಚಿನ್ನ ಹಾಗೂ 285 ಗ್ರಾಂ ಬೆಳ್ಳಿ ಸಮರ್ಪಿಸಿದ್ದಾರೆ.

ಮಂತ್ರಾಲಯ ರಾಯರ ಮಠದಲ್ಲಿ ಬಿಗಿ ಭದ್ರತೆಯ ನಡುವೆ ಹುಂಡಿ ಎಣಿಕೆ ಕಾರ್ಯ ನಡೆಸಲಾಯಿತು. ಎಣಿಕೆ ಕಾರ್ಯದಲ್ಲಿ ಮಠದ ನೂರಾರು ಸಿಬ್ಬಂದಿ, ಭಜನಾ ಮಂಡಳಿಯ ಸದಸ್ಯರು ಹಾಗೂ ಕರಸೇವಕರು ಭಾಗವಹಿಸಿದ್ದರು. ಮುಜರಾಯಿ ಇಲಾಖೆ ಅಧಿಕಾರಿಗಳು ಹಾಗೂ ಶ್ರೀಮಠದ ಅಧಿಕಾರಿಗಳು ಹುಂಡಿ ಎಣಿಕೆ ವೇಳೆ ಸ್ಥಳದಲ್ಲೇ ಹಾಜರಿದ್ದು, ಸಂಪೂರ್ಣ ಪ್ರಕ್ರಿಯೆಯನ್ನು ಮೇಲ್ವಿಚಾರಣೆ ಮಾಡಿದರು.

ನಮ್ಮನ್ನು ಸಂಪರ್ಕಿಸಲು ದಯವಿಟ್ಟು ಈ ವಿವರಗಳನ್ನು ಬಳಸಿ

s3kannadanews@gmail.com

+91 9902544556

© 2026 S3 Media House. All Rights Reserved.

ನಮ್ಮ ನ್ಯೂಸ್ ಅಪ್ಡೇಟ್ಗಳಿಗಾಗಿ ಸಬ್ಸ್ಕ್ರೈಬ್ ಮಾಡಿ

ನಮ್ಮ ವಾಟ್ಸ್ ಆಪ್ ಚಾನೆಲ್ ಗೆ ಸೇರಲು ಈ ಬಟನ್ ಕ್ಲಿಕ್ ಮಾಡಿ ಕ್ಷಣ ಕ್ಷಣದ ಆಪ್ಡೆಟ್ ಪಡೆಯಿರಿ.