ಪರಿಷತ್​ ಚುನಾವಣೆ ಐದನೇ ಅಭ್ಯರ್ಥಿ ಗೆಲುವಿಗೆ ಕಾಂಗ್ರೆಸ್​ ರಣತಂತ್ರ: ಈಗಲ್ಟನ್​ನಲ್ಲಿ ಶಾಸಕರ ಸಭೆ!

ವಿನಯ್​ ಕಾರ್ತಿಕ್​ ಗೆಲುವಿಗೆ ಕಾಂಗ್ರೆಸ್​ ಮಾಸ್ಟರ್​ ಪ್ಲಾನ್​: ಕಾಂಗ್ರೆಸ್​ ಜೆಡಿಎಸ್​ ಪ್ರತಿಷ್ಠೆಯ ಕದನ!

ರಾಜಕೀಯ

6/16/20261 min read

ರಾಜ್ಯ ರಾಜಕಾರಣದಲ್ಲಿ ಪರಿಷತ್ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ಮೇಲ್ಮನೆಯ ಚುನಾವಣೆಗೆ ಮುನ್ನ ಕಾಂಗ್ರೆಸ್ ಮಹತ್ವದ ಶಾಸಕಾಂಗ ಪಕ್ಷದ ಸಭೆ ಕರೆದಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆಯುತ್ತಿರುವ ಮೊದಲ ಸಿಎಲ್‌ಪಿ ಸಭೆ ಇಂದು ಸಂಜೆ 6 ಗಂಟೆಗೆ ಬಿಡದಿಯ ಈಗಲ್ಟನ್ ರೆಸಾರ್ಟ್‌ನಲ್ಲಿ ಆರಂಭವಾಗಲಿದೆ.

ಮೇಲ್ಮನೆಯ ಐದನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಅವರನ್ನು ಗೆಲ್ಲಿಸಿಕೊಳ್ಳಲು ಕಾಂಗ್ರೆಸ್ ನಾಯಕರು ರಣತಂತ್ರ ರೂಪಿಸುತ್ತಿದ್ದಾರೆ. ಮತಗಳ ಕೊರತೆ ಇದ್ದರೂ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು, ಮತ್ತೊಂದೆಡೆ ಜೆಡಿಎಸ್ ಕೂಡ ತನ್ನ ಅಭ್ಯರ್ಥಿಯನ್ನು ಅಖಾಡಕ್ಕಿಳಿಸಿದೆ.

ಹೀಗಾಗಿ ಎರಡೂ ಪಕ್ಷಗಳ ನಾಯಕರಿಗೆ ಈ ಚುನಾವಣೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಸೋಲು ಕಂಡರೆ ರಾಜಕೀಯ ಇಮೇಜ್‌ಗೆ ಧಕ್ಕೆಯಾಗುವ ಆತಂಕ ಇರುವುದರಿಂದ ಗೆಲುವಿಗಾಗಿ ನಾನಾ ತಂತ್ರಗಳನ್ನು ರೂಪಿಸಲಾಗುತ್ತಿದೆ.

ಜೂನ್ 18ರಂದು ನಡೆಯಲಿರುವ ಪರಿಷತ್ ಚುನಾವಣೆಯವರೆಗೆ ಕಾಂಗ್ರೆಸ್ ಶಾಸಕರನ್ನು ರೆಸಾರ್ಟ್‌ನಲ್ಲೇ ಉಳಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಮತದಾನದ ದಿನ ರೆಸಾರ್ಟ್‌ನಿಂದ ನೇರವಾಗಿ ವಿಧಾನಸೌಧಕ್ಕೆ ತೆರಳಿ ಮತ ಚಲಾಯಿಸುವಂತೆ ಶಾಸಕರಿಗೆ ಸೂಚನೆ ನೀಡಲಾಗಿದೆ.

ಇದರಿಂದ ಕಾಂಗ್ರೆಸ್‌ನ 135ಕ್ಕೂ ಹೆಚ್ಚು ಶಾಸಕರು ಹಾಗೂ ಬೆಂಬಲಿಗ ಸದಸ್ಯರು ರೆಸಾರ್ಟ್‌ಗೆ ಶಿಫ್ಟ್ ಆಗಲಿದ್ದಾರೆ. ಯಾರಿಗೆ ಮತ ಹಾಕಬೇಕು, ಮತದಾನದ ವೇಳೆ ಯಾವ ತಂತ್ರ ಅನುಸರಿಸಬೇಕು ಎಂಬುದರ ಕುರಿತು ಸಿಎಲ್‌ಪಿ ಸಭೆಯಲ್ಲಿ ವಿವರವಾಗಿ ಮಾರ್ಗದರ್ಶನ ನೀಡಲಾಗಲಿದೆ.

ಪರಿಷತ್ ಚುನಾವಣೆ ಸಮೀಪಿಸುತ್ತಿದ್ದಂತೆ, ರಾಜ್ಯ ರಾಜಕಾರಣದಲ್ಲಿ ರೆಸಾರ್ಟ್ ರಾಜಕಾರಣ ಮತ್ತೆ ಸದ್ದು ಮಾಡತೊಡಗಿದೆ.

ನಮ್ಮನ್ನು ಸಂಪರ್ಕಿಸಲು ದಯವಿಟ್ಟು ಈ ವಿವರಗಳನ್ನು ಬಳಸಿ

s3kannadanews@gmail.com

+91 9902544556

© 2026 S3 Media House. All Rights Reserved.

ನಮ್ಮ ನ್ಯೂಸ್ ಅಪ್ಡೇಟ್ಗಳಿಗಾಗಿ ಸಬ್ಸ್ಕ್ರೈಬ್ ಮಾಡಿ

ನಮ್ಮ ವಾಟ್ಸ್ ಆಪ್ ಚಾನೆಲ್ ಗೆ ಸೇರಲು ಈ ಬಟನ್ ಕ್ಲಿಕ್ ಮಾಡಿ ಕ್ಷಣ ಕ್ಷಣದ ಆಪ್ಡೆಟ್ ಪಡೆಯಿರಿ.