ದೇವನಹಳ್ಳಿಯಲ್ಲಿ ಎನ್‌ಡಿಎ ಮೈತ್ರಿಕೂಟದಿಂದ ಅದ್ಧೂರಿ ವಿಜಯೋತ್ಸವ

LATEST NEWSಬೆಂಗಳೂರುಬೆಂಗಳೂರು ಗ್ರಾಮಾಂತರರಾಜಕೀಯ

S3 Media House

10/27/20261 min read

ದೇವನಹಳ್ಳಿ: 2026ರ ಕರ್ನಾಟಕ ವಿಧಾನಪರಿಷತ್ ಚುನಾವಣೆಯ ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಎ.ಪಿ. ರಂಗನಾಥ್ ಅವರು ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ, ದೇವನಹಳ್ಳಿ ಪಟ್ಟಣದ ಹಳೆ ಬಸ್ ನಿಲ್ದಾಣದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ನಾಯಕರು ಹಾಗೂ ಕಾರ್ಯಕರ್ತರು ಅದ್ಧೂರಿಯಾಗಿ ವಿಜಯೋತ್ಸವ ಆಚರಿಸಿದರು.

ವಿಜಯೋತ್ಸವದ ಅಂಗವಾಗಿ ಮೈತ್ರಿಕೂಟದ ಮುಖಂಡರು ಹಾಗೂ ಕಾರ್ಯಕರ್ತರು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಜೆಡಿಎಸ್ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಕೆ.ವಿ. ಮಂಜುನಾಥ್, ಜೆಡಿಎಸ್ ತಾಲೂಕು ಅಧ್ಯಕ್ಷ ಎಸ್. ಮಹೇಶ್ ಹಾಗೂ ಬಿಜೆಪಿ ತಾಲೂಕು ಅಧ್ಯಕ್ಷ ಅಂಬರೀಶ್ ಗೌಡ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಎನ್‌ಡಿಎ ಮೈತ್ರಿಕೂಟದ ನೂರಾರು ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡು, ಎ.ಪಿ. ರಂಗನಾಥ್ ಮತ್ತು ಮೈತ್ರಿಕೂಟದ ಪರವಾಗಿ ಜಯಘೋಷಗಳನ್ನು ಕೂಗಿದರು. ಅಭ್ಯರ್ಥಿಯ ಗೆಲುವನ್ನು ಮೈತ್ರಿಕೂಟದ ನಾಯಕರು ಹಾಗೂ ಕಾರ್ಯಕರ್ತರು ಸಂಭ್ರಮದಿಂದ ಸ್ವಾಗತಿಸಿ, ವಿಜಯೋತ್ಸವದ ಮೂಲಕ ತಮ್ಮ ಹರ್ಷ ವ್ಯಕ್ತಪಡಿಸಿದರು.

ನಮ್ಮನ್ನು ಸಂಪರ್ಕಿಸಲು ದಯವಿಟ್ಟು ಈ ವಿವರಗಳನ್ನು ಬಳಸಿ

s3kannadanews@gmail.com

+91 9902544556

© 2026 S3 Media House. All Rights Reserved.

ನಮ್ಮ ನ್ಯೂಸ್ ಅಪ್ಡೇಟ್ಗಳಿಗಾಗಿ ಸಬ್ಸ್ಕ್ರೈಬ್ ಮಾಡಿ

ನಮ್ಮ ವಾಟ್ಸ್ ಆಪ್ ಚಾನೆಲ್ ಗೆ ಸೇರಲು ಈ ಬಟನ್ ಕ್ಲಿಕ್ ಮಾಡಿ ಕ್ಷಣ ಕ್ಷಣದ ಆಪ್ಡೆಟ್ ಪಡೆಯಿರಿ.