ಒಂಟಿ ಮನೆಗಳೇ ಟಾರ್ಗೆಟ್! ಬೆಂಗಳೂರಿನಲ್ಲಿ 30 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ದೋಚಿದ ಖತರ್ನಾಕ್ ಗ್ಯಾಂಗ್

ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಕಳ್ಳರ ಅಟ್ಟಹಾಸ ಮುಂದುವರಿದಿದೆ.

ಬೆಂಗಳೂರು ಗ್ರಾಮಾಂತರಅಪರಾಧLATEST NEWS

S3 Media House

6/10/20261 min read

ಜನರೇ ಎಚ್ಚರ... ಎಚ್ಚರ..! ಒಂಟಿ ಮನೆಗಳನ್ನು ಟಾರ್ಗೆಟ್ ಮಾಡುತ್ತಿರುವ ಖತರ್ನಾಕ್ ಗ್ಯಾಂಗ್ ಇದೀಗ ಮತ್ತೊಂದು ಭಾರಿ ಕಳ್ಳತನಕ್ಕೆ ಕೈ ಹಾಕಿದೆ.

ಬೆಂಗಳೂರು ಉತ್ತರ ತಾಲೂಕಿನ ಕದಿರೇನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಅರುಣ್ ಕುಮಾರ್ ಎಂಬುವವರ ಮನೆಗೆ ಕಳ್ಳರು ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಮತ್ತು ಬೆಳ್ಳಿ ಸಾಮಗ್ರಿಗಳನ್ನು ದೋಚಿದ್ದಾರೆ. ಸಂಬಂಧಿಕರ ಮನೆಯ ಶುಭಕಾರ್ಯಕ್ಕೆಂದು ದಂಪತಿ ಎರಡು ದಿನಗಳ ಕಾಲ ಹೊರಗಡೆ ತೆರಳಿದ್ದ ವೇಳೆ, ಮನೆ ಖಾಲಿ ಇರುವುದನ್ನು ಗಮನಿಸಿದ ಕಳ್ಳರು ಕಬ್ಬಿಣದ ಡೋರ್ ಲಾಕ್ ಮುರಿದು ಒಳನುಗ್ಗಿದ್ದಾರೆ.

ಬಳಿಕ ಮನೆಯ ಬೀರು ಹಾಗೂ ಲಾಕರ್‌ಗಳನ್ನು ಒಡೆದು, ಸುಮಾರು 200 ಗ್ರಾಂ ಚಿನ್ನ, 3 ಕೆಜಿ ಬೆಳ್ಳಿ, ರೇಷ್ಮೆ ಸೀರೆ ಸೇರಿದಂತೆ ಒಟ್ಟು 30 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ಕಳವು ಮಾಡಿದ್ದಾರೆ. ಮನೆಗೆ ಮರಳಿದ ಕುಟುಂಬಸ್ಥರಿಗೆ ಕಳ್ಳತನದ ವಿಷಯ ತಿಳಿದು ಬೆಚ್ಚಿಬಿದ್ದಿದ್ದು, ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಒಂಟಿ ಮನೆಗಳ ಮೇಲೆ ಕಳ್ಳರ ಕಣ್ಣು ಬಿದ್ದಿರುವ ಹಿನ್ನೆಲೆ, ಸಾರ್ವಜನಿಕರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ನಮ್ಮನ್ನು ಸಂಪರ್ಕಿಸಲು ದಯವಿಟ್ಟು ಈ ವಿವರಗಳನ್ನು ಬಳಸಿ

s3kannadanews@gmail.com

+91 9902544556

© 2026 S3 Media House. All Rights Reserved.

ನಮ್ಮ ನ್ಯೂಸ್ ಅಪ್ಡೇಟ್ಗಳಿಗಾಗಿ ಸಬ್ಸ್ಕ್ರೈಬ್ ಮಾಡಿ

ನಮ್ಮ ವಾಟ್ಸ್ ಆಪ್ ಚಾನೆಲ್ ಗೆ ಸೇರಲು ಈ ಬಟನ್ ಕ್ಲಿಕ್ ಮಾಡಿ ಕ್ಷಣ ಕ್ಷಣದ ಆಪ್ಡೆಟ್ ಪಡೆಯಿರಿ.