ಪೊಲೀಸ್ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ – 1,600 ಹುದ್ದೆಗಳ ಭರ್ತಿ ಆರಂಭ

ಇಂದಿನಿಂದ ಅರ್ಜಿ ಆರಂಭ! ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ

LATEST NEWSಉಪಯುಕ್ತ

S3 Media House

6/23/20261 min read

ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಅಂದರೆ KEA, 1,600 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ಇಂದಿನಿಂದಲೇ ಆನ್‌ಲೈನ್ ಅರ್ಜಿ ಪ್ರಕ್ರಿಯೆ ಆರಂಭವಾಗಿದೆ.

ಒಟ್ಟು 1,600 ಹುದ್ದೆಗಳಲ್ಲಿ, 1,421 ಹುದ್ದೆಗಳು RPC/CAR ವೃಂದಕ್ಕೆ ಮತ್ತು 179 ಹುದ್ದೆಗಳು DAR, ಅಂದರೆ ಕಲ್ಯಾಣ ಕರ್ನಾಟಕ ಹಾಗೂ ಸ್ಥಳೀಯ ವೃಂದಕ್ಕೆ ಮೀಸಲಾಗಿವೆ. ಅರ್ಜಿ ಸಲ್ಲಿಸಲು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಕಡ್ಡಾಯ. ಜೊತೆಗೆ ಕನ್ನಡ ಭಾಷಾ ಅರ್ಹತೆ ಹೊಂದಿರಬೇಕು.

ಪ್ರಮುಖ ದಿನಾಂಕಗಳನ್ನು ಗಮನಿಸಿ.
ಅರ್ಜಿ ಸಲ್ಲಿಕೆ ಆರಂಭ – ಜೂನ್ 22, 2026.
ಅರ್ಜಿ ಸಲ್ಲಿಸಲು ಕೊನೆಯ ದಿನ – ಜುಲೈ 22, 2026.
ಶುಲ್ಕ ಪಾವತಿಗೆ ಕೊನೆಯ ದಿನ – ಜುಲೈ 24, 2026.
ಲಿಖಿತ ಪರೀಕ್ಷೆ – ಸೆಪ್ಟೆಂಬರ್ 6, 2026.

ಆಯ್ಕೆಯಾದ ಅಭ್ಯರ್ಥಿಗಳಿಗೆ ₹37,500 ರಿಂದ ₹76,100 ವರೆಗೆ ವೇತನ ದೊರೆಯಲಿದೆ. ಆಯ್ಕೆ ಪ್ರಕ್ರಿಯೆಯಲ್ಲಿ ಲಿಖಿತ ಪರೀಕ್ಷೆ, ದೈಹಿಕ ಮಾನದಂಡ ಪರೀಕ್ಷೆ (PST), ದೈಹಿಕ ಸಾಮರ್ಥ್ಯ ಪರೀಕ್ಷೆ (PET), ವೈದ್ಯಕೀಯ ಪರೀಕ್ಷೆ ಹಾಗೂ ದಾಖಲೆ ಪರಿಶೀಲನೆ ನಡೆಯಲಿದೆ.

ಈ ಬಾರಿ ಪರೀಕ್ಷೆಯಲ್ಲಿ ಋಣಾತ್ಮಕ ಮೌಲ್ಯಮಾಪನ, ಅಂದರೆ ನೆಗಟಿವ್ ಮಾರ್ಕಿಂಗ್ ಜಾರಿಯಲ್ಲಿದೆ. ಉತ್ತರ ಗೊತ್ತಿಲ್ಲದ ಪ್ರಶ್ನೆಗಳಿಗೆ ಉತ್ತರ ಪತ್ರಿಕೆಯಲ್ಲಿ ನೀಡಿರುವ ಐದನೇ ವೃತ್ತವನ್ನು ಕಡ್ಡಾಯವಾಗಿ ಶೇಡ್ ಮಾಡಬೇಕು. ಇದಕ್ಕಾಗಿ ಹೆಚ್ಚುವರಿ ಐದು ನಿಮಿಷಗಳ ಕಾಲಾವಕಾಶ ನೀಡಲಾಗುತ್ತದೆ. ಐದನೇ ವೃತ್ತವನ್ನು ಶೇಡ್ ಮಾಡದೇ ಬಿಟ್ಟರೆ, ಪ್ರತಿ ಪ್ರಶ್ನೆಗೆ 0.25 ಅಂಕಗಳನ್ನು ಕಡಿತ ಮಾಡಲಾಗುತ್ತದೆ.

ಇತ್ತೀಚೆಗಷ್ಟೇ 3,991 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿರುವ ಬೆನ್ನಲ್ಲೇ, ಇದೀಗ ಮತ್ತೊಮ್ಮೆ 1,600 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗೆ ಅವಕಾಶ ಸಿಕ್ಕಿದೆ.

ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುವ ಕನಸು ಇದ್ದರೆ, ಈ ಅವಕಾಶವನ್ನು ತಪ್ಪಿಸಿಕೊಳ್ಳಬೇಡಿ. ಅರ್ಜಿಯನ್ನು ಜುಲೈ 22ರೊಳಗೆ ಸಲ್ಲಿಸಿ.

ನಮ್ಮನ್ನು ಸಂಪರ್ಕಿಸಲು ದಯವಿಟ್ಟು ಈ ವಿವರಗಳನ್ನು ಬಳಸಿ

s3kannadanews@gmail.com

+91 9902544556

© 2026 S3 Media House. All Rights Reserved.

ನಮ್ಮ ನ್ಯೂಸ್ ಅಪ್ಡೇಟ್ಗಳಿಗಾಗಿ ಸಬ್ಸ್ಕ್ರೈಬ್ ಮಾಡಿ

ನಮ್ಮ ವಾಟ್ಸ್ ಆಪ್ ಚಾನೆಲ್ ಗೆ ಸೇರಲು ಈ ಬಟನ್ ಕ್ಲಿಕ್ ಮಾಡಿ ಕ್ಷಣ ಕ್ಷಣದ ಆಪ್ಡೆಟ್ ಪಡೆಯಿರಿ.