ಸಚಿವ ಸಂಪುಟ ಪುನರ್‌ರಚನೆಗೆ ಒತ್ತಾಯ
ದೆಹಲಿಗೆ 35ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರ ದಂಡು
ಬೆಂಗಳೂರುLATEST NEWS
Keerthi Raj
5/24/20261 min read


ಕರ್ನಾಟಕ ರಾಜಕೀಯದಲ್ಲಿ ಸಚಿವ ಸಂಪುಟ ಪುನರ್‌ರಚನೆ ಚರ್ಚೆ ತೀವ್ರಗೊಂಡಿದ್ದು, ಸಚಿವ ಸ್ಥಾನಾಕಾಂಕ್ಷಿ ಕಾಂಗ್ರೆಸ್ ಶಾಸಕರು ದೆಹಲಿಗೆ ತೆರಳಲು ಸಜ್ಜಾಗಿದ್ದಾರೆ. ವರದಿಗಳ ಪ್ರಕಾರ, 35ಕ್ಕೂ ಹೆಚ್ಚು ಶಾಸಕರು ಮೇ 29ರಂದು ದೆಹಲಿಗೆ ತೆರಳಿ ಪಕ್ಷದ ಹೈಕಮಾಂಡ್ ಮೇಲೆ ಒತ್ತಡ ಹೇರುವ ತಂತ್ರ ರೂಪಿಸಿದ್ದಾರೆ.
ಸಚಿವ ಸ್ಥಾನ ಸಿಗದೇ ಅಸಮಾಧಾನಗೊಂಡಿರುವ ಕೆಲ ಶಾಸಕರು “ಮಾಡು ಇಲ್ಲವೇ ಮಡಿ” ಹೋರಾಟದ ಎಚ್ಚರಿಕೆ ನೀಡಿದ್ದು, ತಮ್ಮ ಬೇಡಿಕೆ ಈಡೇರಿಸಲು ಪಕ್ಷಕ್ಕೆ 15 ದಿನಗಳ ಗಡುವು ನೀಡಿದ್ದಾರೆ ಎನ್ನಲಾಗಿದೆ. ಈ ಬೆಳವಣಿಗೆ ರಾಜ್ಯ ಕಾಂಗ್ರೆಸ್ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮುಂದಿನ ರಾಜಕೀಯ ನಡೆ ಏನು ಎನ್ನುವ ಕುತೂಹಲ ಹೆಚ್ಚಾಗಿದೆ. ಪಕ್ಷದ ಹೈಕಮಾಂಡ್ ಈ ಬೆಳವಣಿಗೆಯನ್ನು ಹೇಗೆ ಎದುರಿಸುತ್ತದೆ ಎಂಬುದು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಲಿದೆ.


