ಶಾಸಕ ಪ್ರದೀಪ್ ಈಶ್ವರ್ ಗೆ ಕೋರ್ಟ್ ನಿಂದ ಜಾಮೀನು ರಹಿತ ವಾರೆಂಟ್ ಜಾರಿ!

LATEST NEWSರಾಜ್ಯ

S3 Media House

8/25/20261 min read

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿ ಆದೇಶ ಹೊರಡಿಸಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ಆದೇಶ ಹೊರಡಿಸಿದ್ದು ಪ್ರಕರಣವನ್ನು ಸೆ.7 ಕ್ಕೆ ವಿಚಾರಣೆ ಮುಂದೂಡಿಕೆ ಮಾಡಲಾಗಿದೆ. ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ ಮಾನಹಾನಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಪ್ರತಾಪ್ ಸಿಂಹ ನ್ಯಾಯಾಲಯದಲ್ಲಿ ಮಾನಹಾನಿ ಪ್ರಕರಣ ದಾಖಲು ಮಾಡಿದ್ದರು.

ಇಂದು ನ್ಯಾಯಾಲಯದಲ್ಲಿ ಪ್ರಕರಣ ವಿಚಾರಣೆ ಬಂದಿದ್ದು, ಈ ವೇಳೆ ಪ್ರತಾಪ್ ಸಿಂಹ ಪರ ವಕೀಲರು ಹಾಜರಿದ್ದರು. ಆದರೆ ಶಾಸಕ ಪ್ರದೀಪ್ ಈಶ್ವರ್ ಮತ್ತು ಪ್ರದೀಪ್ ಪರ ವಕೀಲರು ಇಬ್ಬರು ಗೈರು ಹಾಜರಾಗಿದ್ದರು. ಕಾರಣ ನ್ಯಾಯಾಧೀಶ ಸಂದೀಪ್ ಪಾಟೀಲ್ ರವರು ಪ್ರದೀಪ್ ಈಶ್ವರ್ ಗೆ ಜಾಮೀನು ರಹಿತ ವಾರೆಂಟ್ ನೀಡಿ ಆದೇಶ ಹೊರಡಿಸಿದ್ದಾರೆ.

ನಮ್ಮನ್ನು ಸಂಪರ್ಕಿಸಲು ದಯವಿಟ್ಟು ಈ ವಿವರಗಳನ್ನು ಬಳಸಿ

s3kannadanews@gmail.com

+91 9902544556

© 2026 S3 Media House. All Rights Reserved.

ನಮ್ಮ ನ್ಯೂಸ್ ಅಪ್ಡೇಟ್ಗಳಿಗಾಗಿ ಸಬ್ಸ್ಕ್ರೈಬ್ ಮಾಡಿ

ನಮ್ಮ ವಾಟ್ಸ್ ಆಪ್ ಚಾನೆಲ್ ಗೆ ಸೇರಲು ಈ ಬಟನ್ ಕ್ಲಿಕ್ ಮಾಡಿ ಕ್ಷಣ ಕ್ಷಣದ ಆಪ್ಡೆಟ್ ಪಡೆಯಿರಿ.