ರಾಜ್ಯಸಭೆಗೆ 4 ಅಭ್ಯರ್ಥಿಗಳ ಅವಿರೋಧ ಆಯ್ಕೆ
ರಾಜಕೀಯLATEST NEWS
S3 Media House
6/6/20261 min read


ಕರ್ನಾಟಕ ರಾಜ್ಯಸಭೆ ಚುನಾವಣೆ 2026ರಲ್ಲಿ ನಾಲ್ಕು ಸ್ಥಾನಗಳಿಗೆ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ವಿಧಾನಸಭೆಯ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿ ಕೆ.ಎಂ. ವಿಶಾಲಾಕ್ಷಿ ಅವರು ನಾಲ್ಕೂ ಅಭ್ಯರ್ಥಿಗಳ ಆಯ್ಕೆಯನ್ನು ಅಧಿಕೃತವಾಗಿ ಘೋಷಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಮಲ್ಲಿಕಾರ್ಜುನ ಖರ್ಗೆ, ಮನ್ಸೂರ್ ಅಲಿ ಖಾನ್ ಮತ್ತು ಪವನ್ ಖೇರಾ, ಹಾಗು ಬಿಜೆಪಿ ಅಭ್ಯರ್ಥಿ ನಾಗರಾಜು ಅವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹೆಚ್ಚುವರಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸದ ಹಿನ್ನೆಲೆ, ಮತದಾನದ ಅಗತ್ಯವೇ ಎದುರಾಗಲಿಲ್ಲ.
ಇದರಿಂದ ಕಾಂಗ್ರೆಸ್ ಪಕ್ಷದ ಮೂವರು ಅಭ್ಯರ್ಥಿಗಳು ಹಾಗೂ ಬಿಜೆಪಿ ಪಕ್ಷದ ಒಬ್ಬ ಅಭ್ಯರ್ಥಿ ಸಂಸತ್ತಿನ ಮೇಲ್ಮನೆಗೆ ಪ್ರವೇಶ ಪಡೆದಿದ್ದಾರೆ.
ರಾಜ್ಯಸಭೆ ಚುನಾವಣೆಯಲ್ಲಿ ಅವಿರೋಧ ಆಯ್ಕೆಯ ಮೂಲಕ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗಳು ಆರಂಭವಾಗಿದ್ದು, ಪ್ರಮುಖ ನಾಯಕರು ನೂತನ ಸದಸ್ಯರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.


