ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಮಲಿಂಗಾರೆಡ್ಡಿ ಶಾಕಿಂಗ್ ಹೇಳಿಕೆ!

ಜಲಸಂಪನ್ಮೂಲ ಖಾತೆಯನ್ನು ವಹಿಸಿಕೊಳ್ಳಲು ಹಿಂದೇಟು ಹಾಕಿರುವ ರಾಮಲಿಂಗಾರೆಡ್ಡಿ!

ರಾಜಕೀಯ

S3 Media House

6/5/20261 min read

ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿದೆ. ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಅವರಿಂದ ಮಹತ್ವದ ನಿರ್ಧಾರ ಮಾಡಿದ್ದಾರೆ. ಖಾತೆ ಹಂಚಿಕೆಯ ಬೆನ್ನಲ್ಲೇ ತೀವ್ರ ಅಸಮಾಧಾನ ಹೊರಹಾಕಿರುವ ರೆಡ್ಡಿ, ಇಂದು ತಮ್ಮ ರಾಜೀನಾಮೆ ಸಲ್ಲಿಕೆಗೆ ಅಂತಿಮ ನಿರ್ಧಾರ ಮಾಡಿದ್ದಾರೆ. ಮೂಲಕ ಸಚಿವ ಸ್ಥಾನ ಸಿಕ್ಕ ಎರಡೇ ದಿನಕ್ಕೆ ರಾಜೀಪತ್ರ ರವಾನಿಸಿದ್ದಾರೆ.

ಜಲಸಂಪನ್ಮೂಲ ಖಾತೆಯನ್ನು ವಹಿಸಿಕೊಳ್ಳಲು ಹಿಂದೇಟು ಹಾಕಿರುವ ಅವರು, "ನನ್ನ ಆತ್ಮಸಾಕ್ಷಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ. ಕಾರಣದಿಂದಲೇ ನಾನು ರಾಜೀನಾಮೆ ನಿರ್ಧಾರಕ್ಕೆ ಬಂದಿದ್ದೇನೆ" ಎಂದು ಸ್ಪಷ್ಟಪಡಿಸಿದ್ದಾರೆ.

ಆದರೆ, ಇದೇ ವೇಳೆ ಪಕ್ಷದ ಕಾರ್ಯಕರ್ತರಿಗೆ ದೊಡ್ಡ ಸಂದೇಶ ನೀಡಿರುವ ರಾಮಲಿಂಗಾರೆಡ್ಡಿ, "ನಾನು ಕಾಂಗ್ರೆಸ್ ಪಕ್ಷವನ್ನು ತೊರೆಯುವುದಿಲ್ಲ. ಕೇವಲ ಶಾಸಕನಾಗಿ ಮತ್ತು ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಮುಂದುವರಿಯುತ್ತೇನೆ. ಆದರೆ ಇನ್ನು ಮುಂದೆ ಮಂತ್ರಿಯಾಗುವುದಿಲ್ಲ" ಎಂದು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಹಿರಿಯ ನಾಯಕನ ನಡೆ ಈಗ ಕೈ ಪಾಳಯದಲ್ಲಿ ತಲ್ಲಣ ಸೃಷ್ಟಿಸಿದೆ!

ನಮ್ಮನ್ನು ಸಂಪರ್ಕಿಸಲು ದಯವಿಟ್ಟು ಈ ವಿವರಗಳನ್ನು ಬಳಸಿ

s3kannadanews@gmail.com

+91 9902544556

© 2026 S3 Media House. All Rights Reserved.

ನಮ್ಮ ನ್ಯೂಸ್ ಅಪ್ಡೇಟ್ಗಳಿಗಾಗಿ ಸಬ್ಸ್ಕ್ರೈಬ್ ಮಾಡಿ

ನಮ್ಮ ವಾಟ್ಸ್ ಆಪ್ ಚಾನೆಲ್ ಗೆ ಸೇರಲು ಈ ಬಟನ್ ಕ್ಲಿಕ್ ಮಾಡಿ ಕ್ಷಣ ಕ್ಷಣದ ಆಪ್ಡೆಟ್ ಪಡೆಯಿರಿ.