ಡಿಕೆ ಶಿವಕುಮಾರ್ ಸರಕಾರ ಮೂರೇ ದಿನದಲ್ಲಿ ಮೂರು ಹೋಳು : ಆರ್ ಅಶೋಕ್ ವ್ಯಂಗ್ಯ!
Blog post description.
ರಾಜಕೀಯ
S3 Media House
6/5/20261 min read


ವಿಪಕ್ಷ ನಾಯಕ ಆರ್. ಅಶೋಕ್ ಕಾಂಗ್ರೆಸ್ ಸರ್ಕಾರದ ಒಳಜಗಳದ ಬಗ್ಗೆ ತೀವ್ರ ಟೀಕೆ ಮಾಡಿದ್ದಾರೆ."ಡಿ.ಕೆ. ಶಿವಕುಮಾರ್ ಅವರ ಹಳೆ ಸಿನಿಮಾ ಹೊಸ ಪೋಸ್ಟರ್ ಬಿಡುಗಡೆಯಾಗುವ ಮೊದಲೇ ದಂಗೆ ಶುರುವಾಗಿದೆ. ಮೂರೇ ದಿನಗಳಲ್ಲಿ ಮೂರು ಹೋಳಾಗಿವೆ" ಎಂದು ವ್ಯಂಗ್ಯವಾಡಿದ್ದಾರೆ.
ಸತೀಶ್ ಜಾರಕಿಹೊಳಿಗೂ ಮಾತು ಕೊಟ್ಟಿದ್ದರು. ಆದರೆ, "ಅವರಿಗೂ ಮೋಸ ಮಾಡಿದ್ದಾರೆ" ಎಂಬ ಮಾತುಗಳು ಕೇಳಿಬರುತ್ತಿವೆ ಎಂದು ಅಶೋಕ್ ಹೇಳಿದ್ದಾರೆ. ಹೆಚ್.ಕೆ. ಪಾಟೀಲ್ ಕೂಡ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಇನ್ನೊಂದೆಡೆ, ವಿಧಾನಸೌಧದಲ್ಲಿ ವಿರೋಧ ಪಕ್ಷದ ಪ್ರಶ್ನೆಗಳಿಗೆ ಸಮರ್ಪಕವಾಗಿ ಉತ್ತರ ನೀಡುವ ಸಚಿವರೇ ಇಲ್ಲ ಎಂದು ಟೀಕಿಸಿದ್ದಾರೆ. ಮುನಿಯಪ್ಪ ಅವರು ಖಾತೆ ವಿಚಾರದಲ್ಲಿ ಈಗಾಗಲೇ ಅಸಮಾಧಾನ ವ್ಯಕ್ತಪಡಿಸಲು ಆರಂಭಿಸಿದ್ದಾರೆ ಎಂದು ಹೇಳಿದ್ದಾರೆ.
"ಡಿ.ಕೆ. ಶಿವಕುಮಾರ್ ಅವರಿಗೆ ಸಚಿವ ಸಂಪುಟದ ಮೇಲೆ ಹಿಡಿತ ತಪ್ಪುತ್ತಿದೆ. ಕಾಂಗ್ರೆಸ್ ಪಕ್ಷದೊಳಗಿನ ಜ್ವಾಲಾಮುಖಿ ಮುಂದಿನ ದಿನಗಳಲ್ಲಿ ಸ್ಫೋಟಗೊಳ್ಳುವ ಸಾಧ್ಯತೆ ಇದೆ" ಎಂದು ಅಶೋಕ್ ಅಭಿಪ್ರಾಯಪಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸಚಿವರು ಡಿ.ಕೆ. ಶಿವಕುಮಾರ್ ವಿರುದ್ಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸುವ ಸಾಧ್ಯತೆಯಿದೆ ಎಂದು ಅವರು ಹೇಳಿದ್ದಾರೆ.
ಸದ್ಯಕ್ಕೆ, ಕಾಂಗ್ರೆಸ್ ಒಳಜಗಳದ ಆರೋಪಗಳು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿವೆ.


