ತೆರಿಗೆ ವಂಚಿಸುವ ಖಾಸಗಿ ಬಸ್‌ಗಳ ವಿರುದ್ಧ RTO ಮೆಗಾ ರೇಡ್!
ಸಾದಹಳ್ಳಿ ಟೋಲ್ ಬಳಿ ಬೆಳಗಿನ ಜಾವದಿಂದಲೇ ಕಾರ್ಯಾಚರಣೆ; 70ಕ್ಕೂ ಹೆಚ್ಚು ಬಸ್‌ಗಳ ತಪಾಸಣೆ, 50ಕ್ಕೂ ಅಧಿಕ ಬಸ್‌ಗಳಿಂದ ರಾಜಸ್ವ ಸಂಗ್ರಹ
LATEST NEWSಬೆಂಗಳೂರು ಗ್ರಾಮಾಂತರಅಪರಾಧ
S3 Media House
10/28/20261 min read


ದೇವನಹಳ್ಳಿ: ರಾಜ್ಯಕ್ಕೆ ಪಾವತಿಸಬೇಕಾದ ತೆರಿಗೆಯನ್ನು ಪಾವತಿಸದೆ ಸಂಚರಿಸುತ್ತಿದ್ದ ಖಾಸಗಿ ಬಸ್‌ಗಳ ವಿರುದ್ಧ ಸಾರಿಗೆ ಇಲಾಖೆ ಅಧಿಕಾರಿಗಳು ಬೆಳಗಿನ ಜಾವವೇ ಕಾರ್ಯಾಚರಣೆಗೆ ಇಳಿದಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಸಾದಹಳ್ಳಿ ಟೋಲ್ ಗೇಟ್ ಬಳಿ ವಿಶೇಷ ಕಾರ್ಯಾಚರಣೆ ನಡೆಸಿದ ಆರ್‌ಟಿಒ ಅಧಿಕಾರಿಗಳು, ಬೇರೆ ರಾಜ್ಯಗಳಲ್ಲಿ ನೋಂದಣಿ ಮಾಡಿಸಿಕೊಂಡು ಕರ್ನಾಟಕದಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್‌ಗಳನ್ನು ತಪಾಸಣೆ ನಡೆಸಿ, ತೆರಿಗೆ ಬಾಕಿ ವಸೂಲಿಗೆ ಮುಂದಾಗಿದ್ದಾರೆ.
ಬೇರೆ ರಾಜ್ಯಗಳಲ್ಲಿ ನೋಂದಣಿ ಮಾಡಿಸಿಕೊಂಡು ಕರ್ನಾಟಕಕ್ಕೆ ಬಂದು, ರಾಜ್ಯಕ್ಕೆ ಪಾವತಿಸಬೇಕಾದ ತೆರಿಗೆಯನ್ನು ಪಾವತಿಸದೆ ಸಂಚರಿಸುತ್ತಿದ್ದ ಬಸ್‌ಗಳನ್ನು ಅಧಿಕಾರಿಗಳು ಗುರುತಿಸಿ ಪರಿಶೀಲನೆ ನಡೆಸಿದ್ದಾರೆ. ನಿಯಮ ಉಲ್ಲಂಘಿಸಿರುವ ಬಸ್‌ಗಳಿಂದ ಬಾಕಿ ತೆರಿಗೆಯನ್ನು ವಸೂಲಿ ಮಾಡುವ ಮೂಲಕ ಸರ್ಕಾರದ ರಾಜಸ್ವ ಸಂಗ್ರಹಕ್ಕೆ ಕ್ರಮ ಕೈಗೊಳ್ಳಲಾಗಿದೆ.
ಜಂಟಿ ಆಯುಕ್ತೆ ಶೋಭಾ ಹಾಗೂ ಎಟಿಸಿ ಓಂಕಾರೇಶ್ವರಿ ಅವರ ಮಾರ್ಗದರ್ಶನದಲ್ಲಿ, ದೇವನಹಳ್ಳಿ ಎಆರ್‌ಟಿಒ ಸುರೇಶ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.
ದೇವನಹಳ್ಳಿ, ಯಲಹಂಕ, ಜ್ಞಾನಭಾರತಿ, ರಾಜಾಜಿನಗರ, ಯಶವಂತಪುರ ಹಾಗೂ ಚಿಕ್ಕಬಳ್ಳಾಪುರ ಸೇರಿದಂತೆ ಆರು ಆರ್‌ಟಿಒ ಕಚೇರಿಗಳ ಅಧಿಕಾರಿಗಳು ಮೆಗಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.
ಬೆಳಗಿನ ಜಾವ 2 ಗಂಟೆಯಿಂದ ಬೆಳಗ್ಗೆ 10 ಗಂಟೆಯವರೆಗೆ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು, ಇದುವರೆಗೆ 70ಕ್ಕೂ ಹೆಚ್ಚು ಬಸ್‌ಗಳನ್ನು ತಪಾಸಣೆ ಮಾಡಿದ್ದಾರೆ. ಈ ಪೈಕಿ 50ಕ್ಕೂ ಅಧಿಕ ಬಸ್‌ಗಳಿಂದ ತೆರಿಗೆ ರೂಪದಲ್ಲಿ ರಾಜಸ್ವ ಸಂಗ್ರಹಿಸಲಾಗಿದೆ.
ರಾಜ್ಯಕ್ಕೆ ಬರಬೇಕಾದ ತೆರಿಗೆಯನ್ನು ಪಾವತಿಸದೆ ಸಂಚರಿಸುವ ವಾಹನಗಳ ವಿರುದ್ಧ ಸಾರಿಗೆ ಇಲಾಖೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಮೂಲಕ ತೆರಿಗೆ ವಂಚನೆಗೆ ಕಡಿವಾಣ ಹಾಕಲು ಮುಂದಾಗಿದ್ದಾರೆ.


