S3 ಕನ್ನಡ ನ್ಯೂಸ್ ಬಿಗ್ ಇಂಪ್ಯಾಕ್ಟ್

ಮಣ್ಣು ದಂಧೆಕೋರರು ವಿರುದ್ಧ ಕ್ರಮ ಕೈಗೊಳ್ಳಲು ಮುಂದಾದ ಕಂದಾಯ ಇಲಾಖೆ!

LATEST NEWSಬೆಂಗಳೂರು ಗ್ರಾಮಾಂತರ

S3 Media House

9/10/20261 min read

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕು ಸೋಮತ್ತನಹಳ್ಳಿ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ಲೂಟಿ ಮಾಡಲಾಗುತ್ತಿದೆ ಎಂದು ನಿಮ್ಮ ಎಸ್3 ಕನ್ನಡ ಸುದ್ದಿ ವಾಹಿನಿ ವರದಿ ಮಾಡಿತ್ತು. ಕಳೆದ ಹಲವು ದಿನಗಳಿಂದ ಕೆರೆಯ ಮಣ್ಣನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದೆ. ಆದರೆ ಈ ಸಂಬಂಧ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲವೆಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

ಈ ಸಂಬಂಧ ಇದೀಗ ಎಚ್ಚೆತ್ತುಕೊಂಡಿರುವ ಕಂದಾಯ ಇಲಾಖೆ ಅಧಿಕಾರಿಗಳು ದಂಧೆಕೋರರ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದೆ. ಗ್ರಾಮ ಲೆಕ್ಕಾಧಿಕಾರಿ ವಿಶ್ವನಾಥ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಕ್ರಮ ಮಣ್ಣು ಸಾಗಾಟ ಮಾಡಿರುವವರ ಕುರಿತು ರಾಜಸ್ವ ನಿರೀಕ್ಷಕರಾದ ಪ್ರಕಾಶ್ ರವರಿಗೆ ವರದಿ ನೀಡಿದ್ದು, ಪ್ರಕಾಶ್ ದೇವನಹಳ್ಳಿ ತಹಸೀಲ್ದಾರ್ ಗೆ ಈ ಸಂಬಂಧ ಕ್ರಮ ಜರುಗಿಸುವಂತೆ ವರದಿ ನೀಡಲಿದ್ದಾರೆ.

ಇನ್ನು ಈ ಸಂಬಂಧ ಎಸ್3 ಕನ್ನಡ ನ್ಯೂಸ್ ಗೆ ಪ್ರತಿಕ್ರಿಯೆ ನೀಡಿರುವ ತಹಸೀಲ್ದಾರ್ ಅನಿಲ್, ಯಾರೇ ಕೆರೆಯಲ್ಲಿ ಮಣ್ಣು ಎತ್ತಿದರೆ ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ರೈತರೇ ಆಗಲಿ ಕೆರೆಯಲ್ಲಿ ಮಣ್ಣು ತೆಗೆಯಲು ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ. ಸೋಮತ್ತನಹಳ್ಳಿ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆದಿರುವವರ ಬಗ್ಗೆ ಮಾಹಿತಿ ಪಡೆದು ಅಂತಹವರ ವಿರುದ್ಧ ಸೂಕ್ತ ಕ್ರಮಕ್ಕೆ ಶಿಫಾರಸ್ಸು ಮಾಡುತ್ತೇನೆ ಎಂದು ಹೇಳಿದ್ದಾರೆ.

ನಮ್ಮನ್ನು ಸಂಪರ್ಕಿಸಲು ದಯವಿಟ್ಟು ಈ ವಿವರಗಳನ್ನು ಬಳಸಿ

s3kannadanews@gmail.com

+91 9902544556

© 2026 S3 Media House. All Rights Reserved.

ನಮ್ಮ ನ್ಯೂಸ್ ಅಪ್ಡೇಟ್ಗಳಿಗಾಗಿ ಸಬ್ಸ್ಕ್ರೈಬ್ ಮಾಡಿ

ನಮ್ಮ ವಾಟ್ಸ್ ಆಪ್ ಚಾನೆಲ್ ಗೆ ಸೇರಲು ಈ ಬಟನ್ ಕ್ಲಿಕ್ ಮಾಡಿ ಕ್ಷಣ ಕ್ಷಣದ ಆಪ್ಡೆಟ್ ಪಡೆಯಿರಿ.