ಸಿದ್ದರಾಮಯ್ಯ ಸರ್ಕಾರ ಹೋಗಿ ಡಿಕೆಶಿ ಸರ್ಕಾರ ಬಂದಿದೆ: ಗೋವಿಂದ ಕಾರಜೋಳ ಕಾಂಗ್ರೆಸ್ ವಿರುದ್ಧ ವಾಗ್ದಾಳಿ!

ರಾಜಕೀಯ

S3 Media House

6/11/20261 min read

ಬಿಜೆಪಿ ನಾಯಕ ಗೋವಿಂದ ಕಾರಜೋಳ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

"ಸಿದ್ದರಾಮಯ್ಯ ಸರ್ಕಾರ ಹೋಗಿ, ಡಿಕೆ ಶಿವಕುಮಾರ್ ಸರ್ಕಾರ ಬಂದಿದೆ. ಕೆಲವು ದಲಿತ ಹಿರಿಯ ನಾಯಕರ ದುಃಖವನ್ನು ನಾನು ನೋಡಿದ್ದೇನೆ" ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ದಲಿತ ನಾಯಕರನ್ನು ಪ್ರಶ್ನಿಸಿದ ಕಾರಜೋಳ, "ನೆಹರು ಕಾಲದಿಂದಲೂ ದಲಿತರಿಗೆ ಅನ್ಯಾಯವಾಗಿದೆ. ಕಾಂಗ್ರೆಸ್ ಯಾವತ್ತೂ ದಲಿತರು ಹಾಗೂ ಹಿಂದುಳಿದ ವರ್ಗಗಳ ಪರವಾಗಿ ನಿಂತಿಲ್ಲ" ಎಂದು ಹೇಳಿದ್ದಾರೆ.

ದಲಿತರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಉತ್ತರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಇದೇ ವೇಳೆ ರಾಜ್ಯದ ಗೊಬ್ಬರ ಸಮಸ್ಯೆ ಕುರಿತು ಮಾತನಾಡಿದ ಅವರು, "ಕೇಂದ್ರ ಸರ್ಕಾರ ಅಗತ್ಯ ಪ್ರಮಾಣದ ಗೊಬ್ಬರವನ್ನು ಹಂಚಿಕೆ ಮಾಡುತ್ತಿದೆ. ಆದರೆ ಅದನ್ನು ರೈತರಿಗೆ ತಲುಪಿಸುವ ಜವಾಬ್ದಾರಿ ರಾಜ್ಯ ಸರ್ಕಾರದ್ದು" ಎಂದು ಹೇಳಿದ್ದಾರೆ.

ವಿತರಣೆಯಲ್ಲಿ ವಿಫಲವಾದ ಕಾರಣ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರ ಕೂಡಲೇ ಗೊಬ್ಬರ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಗೋವಿಂದ ಕಾರಜೋಳ ಒತ್ತಾಯಿಸಿದ್ದಾರೆ.

ನಮ್ಮನ್ನು ಸಂಪರ್ಕಿಸಲು ದಯವಿಟ್ಟು ಈ ವಿವರಗಳನ್ನು ಬಳಸಿ

s3kannadanews@gmail.com

+91 9902544556

© 2026 S3 Media House. All Rights Reserved.

ನಮ್ಮ ನ್ಯೂಸ್ ಅಪ್ಡೇಟ್ಗಳಿಗಾಗಿ ಸಬ್ಸ್ಕ್ರೈಬ್ ಮಾಡಿ

ನಮ್ಮ ವಾಟ್ಸ್ ಆಪ್ ಚಾನೆಲ್ ಗೆ ಸೇರಲು ಈ ಬಟನ್ ಕ್ಲಿಕ್ ಮಾಡಿ ಕ್ಷಣ ಕ್ಷಣದ ಆಪ್ಡೆಟ್ ಪಡೆಯಿರಿ.