ಮಾಲೂರಿನಲ್ಲಿ ಒತ್ತುವರಿ ತೆರವು ವೇಳೆ ಉದ್ವಿಗ್ನ ವಾತಾವರಣ: ಹೆಚ್ಚುವರಿ ಎಸ್ಪಿ ರವಿಶಂಕರ್ ಆಕ್ರೋಶ

ಜಮೀನು ಸರ್ವೆ ಹಾಗೂ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಉದ್ವಿಗ್ನ ವಾತಾವರಣ ನಿರ್ಮಾಣ

LATEST NEWSರಾಜ್ಯ

S3 Media House

7/11/20261 min read

ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಅಗಲಕೋಟೆ ಗ್ರಾಮದಲ್ಲಿ ನಡೆಯುತ್ತಿರುವ ಜಮೀನು ಸರ್ವೆ ಹಾಗೂ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಉದ್ವಿಗ್ನ ವಾತಾವರಣ ನಿರ್ಮಾಣಗೊಂಡ ಘಟನೆ ಶುಕ್ರವಾರ ನಡೆದಿದೆ.

ಕಾರ್ಯಾಚರಣೆ ಸಂದರ್ಭದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದ್ದು, ಜೆಡಿಎಸ್ ಮುಖಂಡ ಹೂಡಿ ವಿಜಯ್ ಕುಮಾರ್ ಹಾಗೂ ಮಾಜಿ ಬಿಜೆಪಿ ಶಾಸಕ ಮಂಜುನಾಥ್ ಗೌಡ ಅವರ ಬೆಂಬಲಿಗರು ಪರಸ್ಪರ ವಾಗ್ವಾದ ನಡೆಸಿದರು ಎನ್ನಲಾಗಿದೆ.

ಸರ್ವೆ ನಡೆಸಿ ಜಮೀನಿನ ಗಡಿ ಗುರುತು ಮಾಡುವ ಸ್ಥಳಕ್ಕೆ ಪೊಲೀಸರು ನಿರ್ಬಂಧ ಹೇರಿದ್ದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಉದ್ವಿಗ್ನತೆ ಹೆಚ್ಚಾಯಿತು. ಈ ವೇಳೆ ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಜನರನ್ನು ಚದುರಿಸಿದರು.

ಪರಿಸ್ಥಿತಿ ತೀವ್ರಗೊಳ್ಳುತ್ತಿದ್ದಂತೆ ಕೋಲಾರ ಹೆಚ್ಚುವರಿ ಪೊಲೀಸ್ ಅಧೀಕ್ಷಕ (ಎಎಸ್ಪಿ) ರವಿಶಂಕರ್ ಅವರು ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ ಹಾಗೂ ಇಂಟೆಲಿಜೆನ್ಸ್ ವಿಭಾಗದ ಸಿಬ್ಬಂದಿಯ ಮೇಲೂ ಅಸಮಾಧಾನ ವ್ಯಕ್ತಪಡಿಸಿದರು. ಕರ್ತವ್ಯ ನಿರ್ವಹಣೆಯ ವೇಳೆ ಗುರುತಿನ ಚೀಟಿ ಧರಿಸದಿದ್ದ ವಿಚಾರಕ್ಕೂ ಅವರು ಆಕ್ಷೇಪ ವ್ಯಕ್ತಪಡಿಸಿದರೆಂದು ತಿಳಿದುಬಂದಿದೆ.

ಅಗಲಕೋಟೆ ಗ್ರಾಮದಲ್ಲಿ ಬೆಳಿಗ್ಗೆ ಸುಮಾರು 10 ಗಂಟೆಯಿಂದಲೇ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ಮಾಜಿ ಶಾಸಕ ಮಂಜುನಾಥ್ ಗೌಡ ನೀಡಿದ ದೂರಿನ ಆಧಾರದ ಮೇಲೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದೇ ವೇಳೆ, ಜೆಡಿಎಸ್ ಮುಖಂಡ ಹೂಡಿ ವಿಜಯ್ ಕುಮಾರ್ ಅವರ ಸ್ನೇಹಿತರ ಹೆಸರಿನಲ್ಲಿ ದಾಖಲಾಗಿರುವ ಜಮೀನಿನ ವಿಚಾರಕ್ಕೆ ಸಂಬಂಧಿಸಿದಂತೆ ಸರ್ವೆ ಮತ್ತು ತೆರವು ಪ್ರಕ್ರಿಯೆ ನಡೆಯುತ್ತಿದೆ ಎನ್ನಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಸ್ಥಳದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

ನಮ್ಮನ್ನು ಸಂಪರ್ಕಿಸಲು ದಯವಿಟ್ಟು ಈ ವಿವರಗಳನ್ನು ಬಳಸಿ

s3kannadanews@gmail.com

+91 9902544556

© 2026 S3 Media House. All Rights Reserved.

ನಮ್ಮ ನ್ಯೂಸ್ ಅಪ್ಡೇಟ್ಗಳಿಗಾಗಿ ಸಬ್ಸ್ಕ್ರೈಬ್ ಮಾಡಿ

ನಮ್ಮ ವಾಟ್ಸ್ ಆಪ್ ಚಾನೆಲ್ ಗೆ ಸೇರಲು ಈ ಬಟನ್ ಕ್ಲಿಕ್ ಮಾಡಿ ಕ್ಷಣ ಕ್ಷಣದ ಆಪ್ಡೆಟ್ ಪಡೆಯಿರಿ.