ಲಿವ್-ಇನ್ ಸಂಬಂಧ ವಿರೋಧಿಸಿದ್ದಕ್ಕೆ ತಂದೆ-ತಾಯಿ-ಸೋದರಿ ಕೊಲೆ?
ಬೆಂಗಳೂರು ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ – ಪೊಲೀಸರ ತೀವ್ರ ತನಿಖೆ
LATEST NEWSಅಪರಾಧ
S3 Media House
6/23/20261 min read
ರಾಜಧಾನಿ ಬೆಂಗಳೂರಿನಲ್ಲಿ ತ್ರಿವಳಿ ಕೊಲೆ ಪ್ರಕರಣ ಬೆಳಕಿಗೆ ಬಂದಿದ್ದು, ತೀವ್ರ ಸಂಚಲನ ಮೂಡಿಸಿದೆ. ಕೆ.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸಿಗೇಹಳ್ಳಿಯೊಂದರಲ್ಲಿ ಒಂದೇ ಕುಟುಂಬದ ಮೂವರು ಸದಸ್ಯರು ಹತ್ಯೆಯಾಗಿರುವ ಘಟನೆ ವರದಿಯಾಗಿದೆ.
ಮೃತರನ್ನು ಸೋಮಸುಂದರ್ (55), ಅವರ ಪತ್ನಿ ಮುತ್ತು ಲಕ್ಷ್ಮೀ (48) ಹಾಗೂ ಪುತ್ರಿ ಸುಪ್ರಿಯಾ (20) ಎಂದು ಗುರುತಿಸಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಲಿವ್-ಇನ್ ಸಂಬಂಧಕ್ಕೆ ಕುಟುಂಬದ ವಿರೋಧವೇ ಈ ಘಟನೆಗೆ ಕಾರಣವಾಗಿರಬಹುದು ಎಂಬ ಶಂಕೆಯನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಈ ಪ್ರಕರಣದಲ್ಲಿ ಮೃತ ದಂಪತಿಯ ಪುತ್ರಿ ಶ್ವೇತಾ ಹಾಗೂ ಆಕೆಯ ಸ್ನೇಹಿತ ಕೆನತ್ ಮೇಲೆ ಶಂಕೆ ವ್ಯಕ್ತವಾಗಿದ್ದು, ಇಬ್ಬರ ಪಾತ್ರದ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದ್ದು, ನಿಖರ ಕಾರಣ ಮತ್ತು ಘಟನೆಯ ಸಂಪೂರ್ಣ ವಿವರಗಳು ತನಿಖೆಯ ಬಳಿಕವೇ ಸ್ಪಷ್ಟವಾಗಲಿವೆ.
ಘಟನಾ ಸ್ಥಳಕ್ಕೆ ಕೆ.ಆರ್.ಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಾಕ್ಷ್ಯಗಳನ್ನು ಸಂಗ್ರಹಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ಪ್ರಕರಣದ ಎಲ್ಲ ಆಯಾಮಗಳಲ್ಲೂ ತನಿಖೆ ಮುಂದುವರಿದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.




