ಕೇಂದ್ರ ಗೃಹ ಸಚಿವರ ದಕ್ಷತಾ ಪದಕಕ್ಕೆ ಕರ್ನಾಟಕದ ಏಳು ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಆಯ್ಕೆ! ಯಾರ್ಯಾರು ಗೊತ್ತಾ?

2026ನೇ ಸಾಲಿನ ತನಿಖಾ ಕ್ಷೇತ್ರದ ಸಾಧನೆ ಗುರುತಿಸಿ ಪದಕ ಘೋಷಣೆ – ಬೆಳಗಾವಿ, ಬೆಂಗಳೂರು, ರಾಯಚೂರು ಸೇರಿದಂತೆ ವಿವಿಧ ಜಿಲ್ಲೆಗಳ ಸಾಧಕರಿಗೆ ಗೌರವ

ರಾಜ್ಯLATEST NEWSದೇಶ

S3 Media House

10/31/20261 min read

ಪೊಲೀಸ್ ಇಲಾಖೆಯ ತನಿಖಾ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ನೀಡಲಾಗುವ 2026ನೇ ಸಾಲಿನ ಕೇಂದ್ರ ಗೃಹ ಸಚಿವರ ದಕ್ಷತಾ ಪದಕ ಪ್ರಕಟಿಸಲಾಗಿದೆ. ಕರ್ನಾಟಕದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಈ ಪ್ರತಿಷ್ಠಿತ ಗೌರವಕ್ಕೆ ಆಯ್ಕೆಯಾಗಿದ್ದು, ರಾಜ್ಯ ಪೊಲೀಸ್ ಇಲಾಖೆಗೆ ಹೆಮ್ಮೆಯ ಸಂಗತಿಯಾಗಿದೆ.

ಅಪರಾಧ ಪ್ರಕರಣಗಳ ತನಿಖೆಯಲ್ಲಿ ವೃತ್ತಿಪರತೆ, ಕರ್ತವ್ಯನಿಷ್ಠೆ, ಶ್ರದ್ಧೆ ಹಾಗೂ ಉತ್ತಮ ಕಾರ್ಯಕ್ಷಮತೆ ಪ್ರದರ್ಶಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಗುರುತಿಸಿ ಈ ಪದಕಕ್ಕೆ ಆಯ್ಕೆ ಮಾಡಲಾಗಿದೆ.

ಪದಕಕ್ಕೆ ಆಯ್ಕೆಯಾದ ಅಧಿಕಾರಿಗಳು ಹಾಗೂ ಸಿಬ್ಬಂದಿ:

  1. ಇನ್ಸ್‌ಪೆಕ್ಟರ್ ಶೋಭಾ ಎನ್. – ಹಲಸೂರು ಗೇಟ್ ಪೊಲೀಸ್ ಠಾಣೆ, ಬೆಂಗಳೂರು.

  2. ಇನ್ಸ್‌ಪೆಕ್ಟರ್ ಬಾವುದ್ದೀನ್ ರುಕ್ಕುದ್ದೀನ್ – ಮಾಳಮಾರುತಿ ಪೊಲೀಸ್ ಠಾಣೆ, ಬೆಳಗಾವಿ.

  3. ಇನ್ಸ್‌ಪೆಕ್ಟರ್ ಮಂಜುನಾಥ್ – ದೇವದುರ್ಗ ಪೊಲೀಸ್ ಠಾಣೆ, ರಾಯಚೂರು.

  4. ಎಎಸ್‌ಐ ರತ್ನಮ್ಮ.

  5. ಸಿಎಚ್‌ಸಿ ಬಾಲಕೃಷ್ಣ.

  6. ಡಾ. ಚಂದ್ರಶೇಖರ್ – ಡೈರೆಕ್ಟರ್.

ತನಿಖಾ ಕ್ಷೇತ್ರದಲ್ಲಿ ಸಲ್ಲಿಸಿರುವ ಗಮನಾರ್ಹ ಸೇವೆ ಹಾಗೂ ಸಾಧನೆಯನ್ನು ಗುರುತಿಸಿ ಈ ಗೌರವ ನೀಡಲಾಗುತ್ತಿದೆ. ಪದಕಕ್ಕೆ ಆಯ್ಕೆಯಾಗಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕ ವಲಯದಿಂದ ಅಭಿನಂದನೆಗಳು ವ್ಯಕ್ತವಾಗುತ್ತಿವೆ.

ಪೊಲೀಸ್ ಇಲಾಖೆಯ ಗೌರವ ಹೆಚ್ಚಿಸಿರುವ ಈ ಸಾಧಕರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.

ನಮ್ಮನ್ನು ಸಂಪರ್ಕಿಸಲು ದಯವಿಟ್ಟು ಈ ವಿವರಗಳನ್ನು ಬಳಸಿ

s3kannadanews@gmail.com

+91 9902544556

© 2026 S3 Media House. All Rights Reserved.

ನಮ್ಮ ನ್ಯೂಸ್ ಅಪ್ಡೇಟ್ಗಳಿಗಾಗಿ ಸಬ್ಸ್ಕ್ರೈಬ್ ಮಾಡಿ

ನಮ್ಮ ವಾಟ್ಸ್ ಆಪ್ ಚಾನೆಲ್ ಗೆ ಸೇರಲು ಈ ಬಟನ್ ಕ್ಲಿಕ್ ಮಾಡಿ ಕ್ಷಣ ಕ್ಷಣದ ಆಪ್ಡೆಟ್ ಪಡೆಯಿರಿ.